ಬಿಜೆಪಿ ವಿರೋಧಿ ನೀತಿಗಳಿಂದಲೇ ದಲಿತರ ಹತ್ಯೆಗಳಾಗುತ್ತಿವೆ : ಸಿದ್ದು ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.28- ಬಿಜೆಪಿಯ ದಲಿತ ರೋಧಿ ನೀತಿಗಳಿಂದಾಗಿ ರಾಜ್ಯದಲ್ಲಿ ನಿರ್ಭಯವಾಗಿ ದಲಿತರ ಹತ್ಯೆಗಳಾಗುತ್ತಿವೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಟ್ವಿಟರ್‍ನಲ್ಲಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕೂಡಲೇ ಆರೋಪಿಗಳನ್ನು ಬಂಸಿ ಕಾನೂನು ಕ್ರಮಕ್ಕೆ ಮುಂದಾಗಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಸುವ, ದಲಿತರನ್ನು ಕೀಳಾಗಿ ಕಾಣುವ ಬಿಜೆಪಿಯ ಬೆಂಬಲದಿಂದಲೇ ಇಂತಹ ಕೊಲೆಗಡುಕರು ನಿರ್ಭಯವಾಗಿ ಇಂತಹ ದುಷ್ಕೃತ್ಯಕ್ಕೆ ಇಳಿಯಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಬಾಯಲ್ಲಿ ಸಮಾನತೆಯ ಮಂತ್ರ ಪಠಿಸುತ್ತದೆ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ ಅನುಸರಿಸುತ್ತದೆ ಎಂದಿರುವ ಸಿದ್ದರಾಮಯ್ಯ, ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಮಗೆ ಸರಿಸಮಾನಾಗಿ ಕುಳಿತಿದ್ದ ಎಂಬ ಕಾರಣಕ್ಕೆ ಅನಿಲ ಇಂಗಳಗಿ ಎಂಬ ಯುವಕನನ್ನು ಅದೇ ಗ್ರಾಮದ ಕೆಲವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತನ ಸಂಬಂಕರು ಶವ ಇಟ್ಟು ಪ್ರತಿಭಟನೆ ನಡೆಸಿದ್ದರು. ಈ ಘಟನೆಯನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Facebook Comments

Sri Raghav

Admin