ಮೋದಿ ಸರ್ಕಾರದ ರಫೆಲ್ ವಿಮಾನ ಖರೀದಿ ಅವ್ಯವಹಾರ ಬಯಲು ಮಾಡ್ತೀವಿ : ಸಿದ್ದು

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--CM-Mysuru-01

ಮೈಸೂರು, ಆ.2೭- ರಫಾಯಲ್ ವಿಮಾನ ಖರೀದಿ ವ್ಯವಹಾರದಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೋಟ್ಯಂತರ ರೂ. ಹಗರಣ ನಡೆಸಿದ್ದು, ಇದನ್ನು ಜನರ ಮುಂದೆ ತರಲು ನಿರ್ಧರಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಲ್ಲಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಫಾಯಲ್ ವಿಮಾನ ಖರೀದಿ ವ್ಯವಹಾರದಲ್ಲಿ ಮೋದಿ ಸರ್ಕಾರ 40 ಸಾವಿರ ಕೋಟಿ ಅವ್ಯವಹಾರ ನಡೆಸಿದೆ. ಈ ಹಗರಣವನ್ನು ಜನತೆಯ ಮುಂದಿಡಲು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿಯವರು ಸಂಸತ್‍ನಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಹೇಳಿದರು.

ನಮ್ಮ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ 26 ವಿಮಾನಗಳ ಖರೀದಿಗೆ ಫ್ರಾನ್ಸ್ ದೇಶದೊಂದಿಗೆ 526 ಕೋಟಿ ರೂ.ಗಳಿಗೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಈಗಿನ ಮೋದಿ ಸರ್ಕಾರ 16 ವಿಮಾನಗಳಿಗೆ 1640 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡು ಅವ್ಯವಹಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದರು.  ವಿಮಾನಗಳಿಗೆ ಅಗತ್ಯವಾದ ಭಾಗಗಳನ್ನು ಬೆಂಗಳೂರಿನ ಎಚ್‍ಎಎಲ್‍ನಲ್ಲಿ ತಯಾರಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಈಗಿನ ಸರ್ಕಾರ ಅಂಬಾನಿ ಗ್ರೂಪ್‍ಗೆ ನೀಡಿದೆ ಎಂದು ದೂರಿದರು.  ಆದ್ದರಿಂದಾಗಿ ನಾವು ಈ ಅವ್ಯವಹಾರವನ್ನು ಜನತೆಯ ಮುಂದಿಡಲು ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಿದರು.

ಬೊಫೋರ್ಸ್ ಹಗರಣಕ್ಕಿಂತ ಇದು ದೊಡ್ಡ ಹಗರಣವಾಗಿದೆ. ದೇಶದ ಜನತೆಯ ತೆರಿಗೆ ಹಣವಾಗಿದೆ. ಹಾಗಾಗಿ ನಾವು ಕೇಂದ್ರ ಸರ್ಕಾರ ಮಾಡಿರುವ ದ್ರೋಹವನ್ನು ಜನತೆಯ ಮುಂದಿಡುತ್ತೇವೆ. ಮೈಸೂರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವ ಶಕ್ತಿಯಿಂದ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್ ಸಹ ತನ್ನ ಸ್ವಂತ ಶಕ್ತಿಯಿಂದ ಅಧಿಕಾರ ಹಿಡಿಯುವುದಿಲ್ಲ ಎಂದರು.

ಹಿಂದಿನಿಂದಲೂ ಬಿಜೆಪಿ-ಜೆಡಿಎಸ್ ಒಂದಾಗಿ ಅಧಿಕಾರ ಚುಕ್ಕಾಣಿ ಹಿಡಿಯುತ್ತಿದೆ. ಈ ಬಾರಿ ಹಾಗೆ ಆಗುವುದಿಲ್ಲ. ಕಾಂಗ್ರೆಸ್ ಪಕ್ಷ ತನ್ನ 65 ವಾರ್ಡ್‍ಗಳಲ್ಲೂ ಅಬ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸದಸ್ಯರೇ ಆರಿಸಿ ಬಂದು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin