ಬ್ರೇಕಿಂಗ್ : ಸಿದ್ದರಾಮಯ್ಯನವರಿಗೂ ಕೊರೋನಾ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಗೆ ಪಡೆಯುತ್ತಿರುವ ಹಿನ್ನೆಲೆಯಲ್ಲೆ ಇತ್ತ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೂ ಕೊರೋನಾ ವಕ್ಕರಿಸಿಕೊಂಡಿದೆ.

ಸಿದ್ದರಾಮಯ್ಯ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುತ್ರ ಡಾ. ಯತೀಂದ್ರ ಅವರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಂತರ ಸಿದ್ದರಾಮಯ್ಯನವರಿಗೆ ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವಿಷಯವನ್ನು ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದವರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿಯನ್ನೂ ಸಿದ್ದರಾಮಯ್ಯ ಮಾಡಿದ್ದಾರೆ. ವಿಪರ್ಯಾಸವೇನೆಂದರೆ, ಏಕಕಾಲಕ್ಕೆ ರಾಜ್ಯದ ಸಿಎಂ ಮತ್ತು ವಿಪಕ್ಷನಾಯಕರು ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದು ಇದೆ ಮೊದಲು ಎನ್ನಬಹುದು.

ಮಣಿಪಾಲ್ ಆಸ್ಪತ್ರೆಯಲ್ಲಿ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯನವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ. ಮಣಿಪಾಲ್ ಆಸ್ಪತ್ರೆಯ ಮಹಡಿಯ ಎಡಭಾಗದ ವಾರ್ಡ್​ನಲ್ಲಿ ಸಿದ್ದರಾಮಯ್ಯನವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಹಡಿಯ ಬಲಭಾಗದ ವಾರ್ಡ್​ನಲ್ಲಿ ಸಿಎಂ ಯಡಿಯೂರಪ್ಪನವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಿಗೂ ವಿಶೇಷ ವಾರ್ಡ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಲ್ಲೇ ಅವರಿಗೆ ಅಗತ್ಯ ಸೇವೆಗಳನ್ನು ನೀಡಲಾಗಿದೆ.

Facebook Comments

Sri Raghav

Admin