ಸಿದ್ದುಗೆ ಪರೋಕ್ಷವಾಗಿ ತಿರುಗೇಟು ಕೊಟ್ಟ ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಸಿಂಧಗಿ, ಅ.24- ಉಣ್ಣೆ ನೇಯ್ದು ಕಂಬಳಿ ಮಾಡುವುದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದ್ದು, ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಿಂಧಗಿ ಮತಕ್ಷೇತ್ರದ ಕೊಕಟನೂರು ಗ್ರಾಮದಲ್ಲಿ ಪ್ರಚಾರ ಕೈಗೊಂಡು ಮಾತನಾಡಿದ ಅವರು, ಉಣ್ಣೆ ಕಂಬಳಿ ಯನ್ನು ಯಾರು
ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ. ಹಾಲುಮತದ ಸಮಾಜಕ್ಕೆ ಸರಿಯಾದ ಅಭಿವೃದ್ಧಿ ಮಾಡಿದವರಿಗೆ ಮಾತ್ರ ಆ ಯೋಗ್ಯತೆ ಪ್ರಾಪ್ತವಾಗುತ್ತದೆ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾರ್ಮಿಕವಾಗಿ ನುಡಿದರು.

ದಾಸಶ್ರೇಷ್ಠರಾದ ಕನಕದಾಸರ ಜನ್ಮಸ್ಥಳ ಬಾಡ ಹಾಗೂ ಅವರ ಕರ್ಮಭೂಮಿ ಕಾಗಿನೆಲೆಯನ್ನು ಬಿಜೆಪಿ ಅಕಾರದ ಅವಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದರು. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಈ ಭಾಗದಲ್ಲಿ ನೀರಾವರಿ, ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ಹಾಗೂ ವಸತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಸರ್ಕಾರವು ಈ ವರ್ಷ ಹೆಚ್ಚುವರಿಯಾಗಿ 5ಲಕ್ಷ ಮನೆಗಳನ್ನು ನಿರ್ಮಿಸಲು ಯೋಜಿಸಿದ್ದು, ಸಿಂಧಗಿ ಕ್ಷೇತ್ರಕ್ಕೆ 5ಸಾವಿರ ಮನೆ ನೀಡಲಾಗುತ್ತದೆ. ಅಮೃತ ಯೋಜನೆಯಡಿಯಲ್ಲಿ 2 ಸಾವಿರ ಮನೆ ನಿರ್ಮಿಸಲಾಗುವುದು. ಹೀಗೆ ಒಟ್ಟು 1ವರ್ಷದಲ್ಲಿ ಸಿಂಧಗಿ ಕ್ಷೇತ್ರದಲ್ಲಿ 7ಸಾವಿರ ಮನೆ ನಿರ್ಮಿಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ಚಿಮ್ಮಲಗಿ ಏತ ನೀರಾವರಿ ಯೋಜನೆಯಡಿ ಬರುವ ಕೋರವಾರ್ ಉಪಕಾಲುವೆ ಟೆಂಡರ್ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಇದರಿಂದ 80 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಗುತ್ತದೆ. ಇಂಡಿ ಮತ್ತು ಗುತ್ತಿ ಬಸವಣ್ಣ ಯೋಜನೆಗಳ ಪುನಃಶ್ಚೇತನ ಮಾಡಲಾಗುತ್ತಿದೆ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಹರಿಕಾರರಾದ ಕಾಂಗ್ರೆಸ್ ಪಕ್ಷ ಯಾರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಲ್ಲ. ಸಂವಿಧಾನ ನೀಡಿದ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ದೇಶ ಸದಾ ಋಣಿಯಾಗಿರಬೇಕು. ಆದರೆ ಅವರ ವಿರುದ್ಧ ಶ್ರೀಮಂತರನ್ನು ನಿಲ್ಲಿಸಿ ಚುನಾವಣೆಯಲ್ಲಿ ಸೋಲಿಸಲಾಯಿತು ಎಂದು ಟೀಕಿಸಿದರು.

ಹಾಲುಮತ ಸಮಾಜ ಇಂದಿಗೂ ಅದೇ ಸ್ಥಿತಿಯಲ್ಲಿದೆ. ಸಣ್ಣ ಸಣ್ಣ ಕಸುಬುಗಳನ್ನು ಮಾಡುವವರು ಸಹ ಅದೇ ಸ್ಥಿತಿಯಲ್ಲಿದ್ದಾರೆ. ಅಲ್ಪಸಂಖ್ಯಾತರಿಗೆ ಈ ಹಿಂದಿನ ಸರ್ಕಾರಗಳು ಕೇವಲ ಚುನಾವಣೆಗೆ ಮಾತ್ರ ಬಳಸಿಕೊಂಡು ಅವರನ್ನು ಅಂಧಕಾರದಲ್ಲಿ ಇಟ್ಟಿದ್ದಾರೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಮಕ್ಕಳು ಮುಂದೆ ಬಂದು ಅಭಿವೃದ್ಧಿ ಹೊಂದಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಮತದಾರರು ಈ ಬಾರಿ ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವಾದ ಮಾಡಬೇಕು. ಮುಂದಿನ ದಿನಗಳಲ್ಲಿ ಅಭಿವೃದ್ಧಿಯಾಗಲು ಅವಕಾಶ ಮಾಡಿಕೊಡಬೇಕು ಎಂದು ಕೋರಿದರು. ಸಚಿವರಾದ ಗೋವಿಂದ್ ಕಾರಜೋಳ, ಸಿ.ಸಿ.ಪಾಟೀಲï, ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin