ಸಿದ್ದು ವಿರುದ್ಧ ಮುನಿಸಿಕೊಂಡರೇ ಸಿಎಂ-ಡಿಸಿಎಂ..?

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01-Kumaraswam

ಬೆಂಗಳೂರು, ನ.10- ಉಪ ಚುನಾವಣೆಯವರೆಗೂ ಕುಚುಕುಗಳಂತೆ ಇದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಿತಾಂಶ ಪ್ರಕಟಗೊಂಡ ನಂತರ ಪರಸ್ಪರ ಮುಸುಕಿನ ಗುದ್ದಾಟಕ್ಕಿಳಿದಿದ್ದಾರೆ. ಟಿಪ್ಪುಜಯಂತಿ ಆಚರಣೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಗೈರು ಹಾಜರಾಗುವ ಮೂಲಕ ಸಿದ್ದರಾಮಯ್ಯ ಅವರ ಮೇಲಿನ ಸಿಟ್ಟನ್ನು ಹೊರ ಹಾಕಿದ್ದಾರೆ.

ಟಿಪ್ಪು ಜಯಂತಿಯನ್ನು ಸರ್ಕಾರದಿಂದ ಆಚರಿಸುವುದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಜಾರಿಗೊಂಡ ಕಾರ್ಯಕ್ರಮ. ತೀವ್ರ ವಿವಾಧಗಳ ನಡುವೆಯೂ ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಬಲವಾಗಿಯೇ ಪ್ರತಿಪಾದಿಸುತ್ತಲೇ ಬಂದಿದ್ದಾರೆ. ಸರ್ಕಾರ ಬದಲಾದ ನಂತರ ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಣೆ ಪರವಾಗಿದೆ. ಆದರೆ, ಭದ್ರತೆಯ ದೃಷ್ಟಿಯಿಂದ ಟಿಪ್ಪುಜಯಂತಿಯನ್ನು ವಿಧಾನಸೌಧದ ಹೊರಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಲು ಸರ್ಕಾರ ಮುಂದಾಗಿತ್ತು.

ಆದರೆ, ಇದಕ್ಕೆ ಒಪ್ಪದ ಸಿದ್ದರಾಮಯ್ಯ ಅವರು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲೇ ಕಾರ್ಯಕ್ರಮ ನಡೆಸಲು ಸೂಚಿಸಿದ್ದರು. ಅದಕ್ಕೆ ತಕ್ಕಂತೆ ಸಚಿವ ಜಮೀರ್ ಅಹಮ್ಮದ್‍ಖಾನ್ ಅವರೂ ವಿಧಾನಸೌಧದಲ್ಲೇ ಕಾರ್ಯಕ್ರಮ ನಡೆಯಬೇಕೆಂದು ಪಟ್ಟು ಹಿಡಿದರು. ಇದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಅಸಮಾಧಾನಕ್ಕೆ ಕಾರಣವಾಗಿದೆ.  ಪೊಲೀಸರು ಕೂಡ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮವನ್ನು ವಿಧಾನಸೌಧದಿಂದ ಹೊರಗೆ ಆಚರಿಸುವುದು ಸೂಕ್ತ ಎಂದು ಸಲಹೆ ನೀಡಿದ್ದರು. ಆದರೆ, ಜಮೀರ್ ಅಹಮ್ಮದ್‍ಖಾನ್ ಅವರ ಹಠದಿಂದಾಗಿ ಬ್ಯಾಂಕ್ವೆಟ್ ಹಾಲ್‍ನಲ್ಲೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಿಂದ ಮುನಿಸಿಕೊಂಡಿರುವ ಪರಮೇಶ್ವರ್ ಅವರು ಟಿಪ್ಪು ಜಯಂತಿ ಕಾರ್ಯಕ್ರಮದಿಂದ ದೂರ ಉಳಿಯಲು ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ.

ಮಾಜಿ ಸಚಿವ ಚೆನ್ನಿಗಪ್ಪ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ನೋಡುವ ನೆಪವಿಟ್ಟುಕೊಂಡು ಪರಮೇಶ್ವರ್ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.ಇನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ಮೂರು ದಿನ ವಿಶ್ರಾಂತಿಗೆ ಎಂದು ಹೇಳಿ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ.

ಮುಖ್ಯಮಂತ್ರಿ ಅವರ ಪರವಾಗಿ ಜೆಡಿಎಸ್‍ನಿಂದ ಸಚಿವ ವೆಂಕಟರಾವ್ ನಾಡಗೌಡ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್‍ನಿಂದ ಸಚಿವ ಜಮೀರ್ ಅಹಮ್ಮದ್ ಖಾನ್ ತಾವೇ ಮುಂದೆ ನಿಂತು ಕಾರ್ಯಕ್ರಮ ಆಯೋಜಿಸಿದ್ದರು. ಆದರೆ, ಪ್ರತಿ ವರ್ಷ ಅದ್ಧೂರಿಯಾಗಿ ಸರ್ಕಾರದ ಎಲ್ಲರ ಸಹಭಾಗಿತ್ವದಲ್ಲಿ ನಡೆಯುತ್ತಿದ್ದ ಟಿಪ್ಪು ಜಯಂತಿ ಈ ಬಾರಿ ನಾಯಕರ ಸ್ವ ಪ್ರತಿಷ್ಠೆಯಿಂದ ಬೋಳು ಬೋಳಾಗಿತ್ತು. ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್ ಆಯೋಜಿಸಿದ್ದರಿಂದ ಜನರ ಪಾಲ್ಗೊಳ್ಳುವಿಕೆಯೂ ಕೂಡ ವಿರಳವಾಗಿತ್ತು.
ಪ್ರತಿ ಹಂತದಲ್ಲೂ ಪೊಲೀಸರ ತಪಾಸಣೆ,

Facebook Comments