ನಾನು ಮತ್ತು ಸಿದ್ದರಾಮಯ್ಯ ಭೇಟಿಯಾಗಿಲ್ಲ : ಬಿಎಸ್‍ವೈ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.13- ಕಳೆದ ಫೆಬ್ರವರಿ 27, 2020ರಂದು ನಡೆದ ನನ್ನ ಜನ್ಮದಿನದ ಕಾರ್ಯಕ್ರಮ ಹೊರತುಪಡಿಸಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ, ಹಾಗೆ ಭೇಟಿ ಮಾಡುವ ಅಗತ್ಯವೂ ನನಗಿಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಕಾರಕ್ಕೆ ತರುವ ನಿಟ್ಟಿನಲ್ಲಿ, ಪಕ್ಷದಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ಗುರಿ ತಲುಪುವ ತನಕ ನಾನು ವಿಶ್ರಮಿಸು ವುದಿಲ್ಲ. ನಂಬಿದ ಸಿದ್ಧಾಂತಗಳೊಂದಿಗೆ ನಾನೆಂದಿಗೂ ರಾಜಿಯಾಗಿಲ್ಲ, ಆಗುವುದೂ ಇಲ್ಲ. ಹಾಗೆಯೇ ಸಿದ್ದರಾಮಯ್ಯನವರು ಕೂಡ ಭೇಟಿ ಯಾಗಿಲ್ಲವೆಂದು ಸ್ಪಷ್ಟಪಡಿಸಿರುವುದರಿಂದ ಮಾಧ್ಯಮ ಗಳಲ್ಲಿ ಪ್ರಸ್ತಾಪವಾಗಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಅರ್ಥರಹಿತವಾಗಿದೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಿನ್ನೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಅವರು ಯಡಿಯೂರಪ್ಪ ಜೊತೆ ಸೇರಿ ಕೊಂಡು ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದರು ಎಂದು ಆರೋಪಿಸಿದ್ದರು.  ಅಲ್ಲದೆ ಸಿದ್ದರಾಮಯ್ಯ ಯಡಿಯೂರಪ್ಪ ನವರನ್ನು ಕದ್ದು ಮುಚ್ಚಿ ಭೇಟಿ ಮಾಡುತ್ತಾರೆ. ಸರ್ಕಾರ ಪತನವಾಗಲು ಅವರು ನಡೆಸಿರುವ ಕುತಂತ್ರ ಹಾಗೂ ಇತ್ತೀಚೆಗೆ ನಡೆದ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ ಎಂದು ಎಚ್‍ಡಿಕೆ ಆರೋಪಿಸಿದ್ದರು.

Facebook Comments