ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಸಿದ್ದರಾಮಯ್ಯ ಸವಾಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.28- ವಿಧಾನಸಭೆಯನ್ನು ವಿಸರ್ಜನೆ ಮಾಡಿ, ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿ ಗೆದ್ದು ಬನ್ನಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಜನವಿರೋ ಮಸೂದೆಗಳನ್ನು ವಿರೋಸಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ ಬೆಂಬಲಿಸಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರನ್ನು ರೈತ ವಿರೋ ಕರೆದಿದ್ದಾರೆ.

ರೈತ ವಿರೋ ಯಡಿಯೂರಪ್ಪನವರೇ ಎಂದು ಸಂಬೋಸಿ ಟ್ವಿಟ್ ಆರಂಭಿಸಿದರುವ ಸಿದ್ದರಾಮಯ್ಯ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದರೆ.

ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ. ಕೊರೊನಾ ಸಂಕಟದಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ರೈತರು ಬೀದಿಗೆ ಬರಲಾರರು ಎಂಬ ದುಷ್ಟ ಆಲೋಚನೆಯಿಂದ ಈ ರೈತ ವಿರೋ ಮಸೂದೆಗಳನ್ನು ಜಾರಿಗೆ ತಂದಿದ್ದೀರಲ್ಲಾ ? ಕಣ್ಣು ಬಿಟ್ಟು ರಾಜ್ಯದ ಬೀದಿಗಳನ್ನು ನೋಡಿ, ರೈತರು ಪ್ರಾಣವನ್ನು ಲೆಕ್ಕಿಸದೆ ಬೀದಿಗೆ ಬಂದಿದ್ದಾರೆ ಎಂದು ಖಾರವಾಗಿ ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರೆ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಹಾವೇರಿಯಲ್ಲಿ ರೈತರನ್ನು ಗುಂಡಿಟ್ಟು ಸಾಯಿಸಿದಿರಿ, ಈ ಬಾರಿ ಮುಖ್ಯಮಂತ್ರಿಯಾದಾಗ ಇಡೀ ರೈತ ಸಮುದಾಯವನ್ನೇ ಸಾಯಿಸಲು ಹೊರಟಿದ್ದೀರಿ ? ನೊಂದ ರೈತರ ಕಣ್ಣೀರ ಶಾಪ ನಿಮಗೆ ತಟ್ಟದೆ ಇರದು.

ಕಾವೇರಿ-ಕೃಷ್ಣ ನದಿನೀರು ಹಂಚಿಕೆಯಲ್ಲಿ ದ್ರೋಹ ಎಸಗಿದ್ದೀರಿ, ಮಹದಾಯಿ-ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದಿರಿ. ಬೀಜ-ರಸಗೊಬ್ಬರ ಪೂರೈಕೆ ಮಾಡದೆ ರೈತರನ್ನು ಗೋಳುಹೊಯ್ಕೊಂಡಿರಿ. ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ರೈತರ ಮೇಲೆ ಇಷ್ಟೊಂದು ದ್ವೇಷ ಯಾಕೆ ? ಕರ್ನಾಟಕದ ಬಗ್ಗೆ ಸೇಡಿನ ಭಾವನೆ ಯಾಕೆ ? ಎಂದು ಕೇಳಿದ್ದಾರೆ.

Facebook Comments

Sri Raghav

Admin