ಗೊರಗುಂಟೆಪಾಳ್ಯದಲ್ಲಿ ಸಿಗ್ನಲ್ ಫ್ರೀ ರಸ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಜರಾಜೇಶ್ವರಿನಗರ, ನ.29- ಆರ್.ಆರ್.ನಗರ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಕ್ಷೇತ್ರದಲ್ಲಿ ಶಾಶ್ವತ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಮುನಿರತ್ನ ತಿಳಿಸಿದರು. ಕ್ಷೇತ್ರ ವ್ಯಾಪ್ತಿಯ ಗೊರಗುಂಟೆಪಾಳ್ಯದಲ್ಲಿ ಕೆಳ ಹಾಗೂ ಮೇಲು ಸೇತುವೆ ನಿರ್ಮಿಸಿ ತುಮಕೂರು ರಸ್ತೆಯನ್ನು ಸಿಗ್ನಲ್ ಫ್ರೀ ರಯಾಗಿಸುವ ಸಂಬಂಧ ಅಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನೇ ದಿನೇ ವಾಹನ ದಟ್ಟಣೆ ವಿಪರೀತವಾಗುತ್ತಿದೆ. ಸಿಗ್ನಲ್ ದಾಟಿ ಸಾಗಲು ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಸಕಾಲದಲ್ಲಿ ಕೆಲಸ ಕಾರ್ಯ ಆಸ್ಪತ್ರೆಗೆ ಹೋಗಲು ನಾಗರಿಕರು ನಿತ್ಯ ಪರದಾಡುತ್ತಿದ್ದಾರೆ.

ಈ ಸಂಬಂಧ ಗೊರಗುಂಟೆಪಾಳ್ಯ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಕೆಳ ಹಾಗೂ ಮೇಲು ಸೇತುವೆ ನಿರ್ಮಾಣದ ಬಗ್ಗೆ ಅಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು ಎಂದರು.

Facebook Comments

Sri Raghav

Admin