ಮನೆ ಬೀಗ ಒಡೆದು ಕಳವು ಮಾಡುತ್ತಿದ್ದವನ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.2- ಮನೆಯ ಬೀಗ ಒಡೆದು ಒಳನುಗ್ಗಿ ಕಳ್ಳತನ ಮಾಡಿದ್ದ ಆರೋಪಿಯನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿ 70 ಸಾವಿರ ಬೆಲೆಯ 750 ಗ್ರಾಂ ತೂಕದ ಬೆಳ್ಳಿ ದೀಪಗಳು ಹಾಗೂ 10.5 ಗ್ರಾಂ ತೂಕದ ಚಿನ್ನದ ಓಲೆಗಳನ್ನು ವಶಪಡಿಸಿ ಕೊಂಡಿದ್ದಾರೆ.

ಏ.24ರಿಂದ ಜುಲೈ 5ರವರೆಗೂ ವ್ಯಕ್ತಿಯೊಬ್ಬರು ತಮ್ಮ ಮನೆ ಬೀಗ ಹಾಕಿಕೊಂಡು ಚೆನ್ನೈಗೆ ಹೋಗಿದ್ದಾಗ ಕಳ್ಳರು ಇವರ ಮನೆ ಬೀಗ ಒಡೆದು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‍ಸ್ಪೆಕ್ಟರ್ ಚಂದ್ರಕಾಂತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ 70 ಸಾವಿರ ಬೆಲೆಯ ಬೆಳ್ಳಿದೀಪದ ಕಂಬಗಳು, 10.5 ಗ್ರಾಂ ತೂಕದ ಚಿನ್ನದ ಓಲೆ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments