5 ಕೆಜಿ ಬೆಳ್ಳಿ ವಸ್ತುಗಳ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.18- ಆಭರಣ ಅಂಗಡಿಯಲ್ಲಿ ಕೆಲಸಕ್ಕಿದ್ದುಕೊಂಡೇ ಬೆಳ್ಳಿ ಸಾಮಾನುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿ 3 ಲಕ್ಷ ರೂ. ಬೆಲೆಯ 5 ಕೆಜಿ ಬೆಳ್ಳಿ ಸಾಮಾನುಗಳನ್ನು ವಶಪಡಿಸಿಕೊಂಡಿದ್ದಾರೆ.ರಾಮನಗರ ಜಿಲ್ಲೆ, ಸುಗ್ಗನಹಳ್ಳಿ ನಿವಾಸಿ ಚೇತನ್ (26) ಬಂಧಿತ ಆರೋಪಿ. ಕಾಳಿಕಾನಗರದಲ್ಲಿ ಬೆಳ್ಳಿ ಆಭರಣಗಳ ಡಿಸೈನ್ ಕೆಲಸ ಮಾಡುವ ಅಂಗಡಿಯಲ್ಲಿ ಎರಡೂವರೆ ತಿಂಗಳಿನಿಂದ ಈತ ಕೆಲಸ ಮಾಡಿಕೊಂಡಿದ್ದನು.

ದಿನೇಶ್ ಎಂಬುವವರಿಂದ ಬೆಳ್ಳಿ ಆಭರಣಗಳನ್ನು ಡಿಸೈನ್ ಕೆಲಸಕ್ಕೆ ಪಡೆದುಕೊಂಡಿದ್ದು, ಫೆ.4ರಂದು ತಂದೆಗೆ ಹುಷಾರಿಲ್ಲದಿದ್ದರಿಂದ ಊರಿಗೆ ಹೋಗಿ ವಾಪಸ್ ಬರುವಷ್ಟರಲ್ಲಿ ಅಂಗಡಿಯಲ್ಲಿದ್ದ ಬೆಳ್ಳಿ ಆಭರಣಗಳನ್ನು ಕಳು ಮಾಡಿಕೊಂಡು ಹೋಗಿದ್ದಾನೆ. ಈ ಸಂಬಂಧ ಅಂಗಡಿ ಮಾಲೀಕರು ಬ್ಯಾಡರಹಳ್ಳಿ ಪೆÇಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಠಾಣೆ ಇನ್ಸ್‍ಪೆಕ್ಟರ್ ರಾಜೀವ್ ಮತ್ತು ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿ 3 ಲಕ್ಷ ಬೆಲೆಬಾಳುವ 5 ಕೆಜಿ ತೂಕದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments