ಸಿಂಧಗಿಯಲ್ಲಿ ಎಚ್‍ಡಿಕೆ ಮತಬೇಟೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.22- ಕಳೆದ ನಾಲ್ಕೈದು ದಿನಗಳಿಂದ ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಪರವಾಗಿ ಕುಮಾರಸ್ವಾಮಿ ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದಾರೆ. ಬಹಿರಂಗ ಸಮಾವೇಶಗಳಿಂತ ಗ್ರಾಮಗಳಿಗೆ ಭೇಟಿ ನೀಡಿ ಮತದಾರರನ್ನು ಸಂಪರ್ಕಿಸಿ ಅಭ್ಯರ್ಥಿ ಪರವಾಗಿ ಮತ ಯಾಚಿಸಲಿದ್ದಾರೆ.
ನಿರಂತರವಾಗಿ ಮತಯಾಚನೆ ಮಾಡುತ್ತಿರುವ ಕುಮಾರಸ್ವಾಮಿ ಅವರು ನಾಳೆ ಬೆಳಗ್ಗೆ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ನಾಳೆ ಇಡೀ ದಿನ ಹಾನಗಲ್ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವ ಕುಮಾರಸ್ವಾಮಿ ಮತ್ತೆ ಸೋಮವಾರದಿಂದ ಇದೇ ಕ್ಷೇತ್ರದಲ್ಲಿ ಅಭ್ಯರ್ಥಿ ನಿಯಾಜ್ ಶೇಖ್ ಪರ ಮತ ಪ್ರಚಾರ ನಡೆಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈಗಾಗಲೇ ಎರಡು ಸುತ್ತಿನ ಚುನಾವಣಾ ಪ್ರಚಾರವನ್ನು ಸಿಂಧಗಿ ಕ್ಷೇತ್ರದಲ್ಲಿ ಕೈಗೊಂಡಿದ್ದಾರೆ. ನಾಳೆಯವರೆಗೂ ಇದೇ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದರು.

ಸಿಂಧಗಿ ಕ್ಷೇತ್ರದಲ್ಲಿ ದೇವೇಗೌಡರು, ಕುಮಾರಸ್ವಾಮಿ ಅಲ್ಲದೆ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು, ಮುಖಂಡರು ಬಿರುಸಿನ ಚುನಾವಣಾ ಪ್ರಚಾರವನ್ನು ಕೈಗೊಂಡಿದ್ದಾರೆ.

ಈ ಕ್ಷೇತ್ರದಲ್ಲಿ ಎಲ್ಲ ರಾಜಕೀಯ ತಂತ್ರವನ್ನು ಬಳಸಿ ಮತದಾರರನ್ನು ಓಲೈಸುವ ಪ್ರಯತ್ನ ಮಾಡಲಾಗುತ್ತಿದೆ. ಅಭ್ಯರ್ಥಿ ಗೆಲುವಿಗಾಗಿ ಪಕ್ಷದ ನಾಯಕರು ಹರಸಾಹಸ ಮಾಡುತ್ತಿದ್ದಾರೆ.

Facebook Comments