ಉಪಚುನಾವಣೆ ನಡೆಯುವ 2 ಕ್ಷೇತ್ರಗಳಲ್ಲಿ 3ರಂದು ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.15- ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆಯುವ ನವೆಂಬರ್ 3ರಂದು ಈ ಎರಡೂ ಕ್ಷೇತ್ರಗಳ ಸರ್ಕಾರಿ ನೌಕರರಿಗೆ ಚುನಾವಣಾ ಆಯೋಗ ವೇತನ ಸಹಿತ ರಜೆ ಘೋಷಿಸಿದೆ.

ಶಿರಾ ಮತ್ತು ಆರ್‍ಆರ್‍ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರ ಮತದಾನಕ್ಕೆ ಅನುಕೂಲ ಮಾಡಿಕೊಡಲು ಆಯೋಗ ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಿಸಿದೆ.

ನವೆಂಬರ್ 3ರಂದು ಶಿರಾ ಮತ್ತು ಆರ್‍ಆರ್‍ನಗರ ವಿಧಾನಸಭಾ ಕ್ಷೇತ್ರಕ್ಕೆ ಮನದಾನ ನಡೆಯಲಿದೆ. ನಿನ್ನೆಯಷ್ಟೇ ನಾಮಪತ್ರ ಸಲ್ಲಿಸಲಾಗಿದೆ.  ಅ.17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.19ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ನವೆಂಬರ್ 3ರಂದು ಮತದಾನ, ನ.10ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.

Facebook Comments

Sri Raghav

Admin