ಶಿರಾ ಉಪ ಚುನಾವಣೆ : 900ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ತುಮಕೂರು, ನ.2- ನಾಳೆ ನಡೆಯುವ ಶಿರಾ ಉಪ ಚುನಾವಣೆ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೋನ ವಂಶಿ ಕೃಷ್ಣ ಅವರು ತಿಳಿಸಿದರು. ಅವರು ಈ ಸಂಜೆ ಪತ್ರಿಕೆಯೊಂದಿಗೆ ಮಾತನಾಡಿ, ಈಗಾಗಲೇ ಚುನಾವಣೆ ಹಿನ್ನೆಲೆಯಲ್ಲಿ ಲೈಸನ್ಸ್ ಹೊಂದಿರುವ ಬಂದೂಕುಗಳನ್ನು ಹಿಂಪಡೆಯಲಾಗಿದೆ. ಹಲವು ರೌಡಿಶೀಟರ್ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು.
ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಸಲು ಯಾವುದೇ ರೀತಿಯ ಅಡಚಣೆಗಳು ಆಗದಂತೆ ಪೊಲೀಸ್ ಇಲಾಖೆ ವತಿಯಿಂದ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಚುನಾವಣೆಗೆ ಇಬ್ಬರು ಡಿವೈಎಸ್ಪಿ, 5 ಮಂದಿ ಇನ್ಸ್ಪೆಕ್ಟರ್ಗಳು 21 ಮಂದಿ ಪಿಎಸ್ಐ, 19 ಎಎಸ್ಐಗಳು , 208 ಹೆಡ್ಕಾನ್ಸ್ಟೇಬಲ್ಗಳು, 561 ಕಾನ್ಸ್ಟೇಬಲ್ಗಳು, 50 ಮಂದಿ ಹೋಂ ಗಾಡ್ರ್ಸ್ಗಳು ಸೇರಿದಂತೆ ಒಟ್ಟು 866 ಮಂದಿ ಸಿಬ್ಬಂದಿ ಹಾಗೂ ಸಿಎಎಫ್, ಎಸ್ಎಪಿ, 3 ಕಾನ್ವೇ ಸೇರಿದಂತೆ ಒಟ್ಟು 270 ಜನ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆಯ ವತಿಯಿಂದ ಸೂಕ್ತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಈ ಸಂದರ್ಭದಲ್ಲಿ ಸಂಜೆ ಪತ್ರಿಕೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ತಿಳಿಸಿದ್ದಾರೆ.