ಗೊಂದಲ ಮುಕ್ತ ತೆರಿಗೆ ಪಾವತಿಗೆ ಕ್ರಮ : ನಿರ್ಮಲಾ ಸೀತಾರಾಮನ್

ಈ ಸುದ್ದಿಯನ್ನು ಶೇರ್ ಮಾಡಿ

ಕೋಲ್ಕತ್ತಾ,ಫೆ.9- ಕೈಗಾರಿಕೆಗಳು ಮತ್ತು ವಾಣಿಜ್ಯೋದ್ಯಮಿಗಳ ಹಿತಾಸಕ್ತಿಗೆ ಕೇಂದ್ರ ಸರ್ಕಾರ ಬದ್ದವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪುನರುಚ್ಚರಿಸಿದ್ದಾರೆ.ಕಿರಿಕಿರಿ ಇಲ್ಲದ ಗೊಂದಲಮುಕ್ತ ತೆರಿಗೆ ಪಾವತಿಗಾಗಿ ಸೂಕ್ತ ವ್ಯವಸ್ಥೆ ಮಾಡಲು ಕೇಂದ್ರ ಸರ್ಕಾರ ಮಧ್ಯಸ್ಥಿತಿಕೆಗಾರನಾಗಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ಘೋಷಿಸಿದರು.

ಕೋಲ್ಕತ್ತಾದಲ್ಲಿ ಇಂದು ಕೈಗಾರಿಕೋದ್ಯಮಿಗಳು ಮತ್ತು ವರ್ತಕರ ಸಂಘದ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‍ನಲ್ಲಿರುವ ಕೆಲವು ಪ್ರಮುಖ ಅಂಶಗಳನ್ನು ಅವರು ಉಲ್ಲೇಖಿಸಿದರು.

ಕೃಷಿ ನಂತರ ಕೈಗಾರಿಕೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಈ ವಲಯದ ಹಿತಾಸಕ್ತಿಗಾಗಿ ಹತ್ತು ಹಲವು ಹೊಸ ಯೋಜನೆಗಳನ್ನು ಪ್ರಕಟಿಸಲಾಗಿದೆ. ಕೈಗಾರಿಕೆಗಳು ಮತ್ತು ವಿವಿಧ ಉದ್ಯಮಗಳನ್ನು ಯಾವತ್ತೂ ನಾವು ಕಡೆಗಣಿಸಿಲ್ಲ. ಅವುಗಳ ಹಿತರಕ್ಷಣೆಗಾಗಿ ನಮ್ಮ ಪರಿಶ್ರಮ ಮುಂದುವರೆದಿದೆ ಎಂದು ಅವರು ತಿಳಿಸಿದರು.

Facebook Comments