ಫೆ.16ರಂದು ಬೆಂಗಳೂರಿನಲ್ಲಿ ಶಿವಯೋಗ ಸಂಭ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.14- ಅಸಂಖ್ಯ ಪ್ರಮಥರ ಗಣಮೇಳ ಹಾಗೂ ಸರ್ವಶರಣರ ಸಮ್ಮೇಳನ ಇದೇ 16ರಂದು ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ತುಮಕೂರು ರಸ್ತೆಯ ನಂದಿ ಗ್ರೌಂಡ್ಸ್ (ಬಿಐಇಸಿ)ಯಲ್ಲಿ ಆಯೋಜಿಸಲಾಗಿದೆ. ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಸಹಯೋಗದಲ್ಲಿ ಜಾಗತಿಕ ಶಾಂತಿ ಮತ್ತು ಪ್ರಗತಿಗಾಗಿ ಶಿವಯೋಗ ಸಂಭ್ರಮ ಹಾಗೂ ಅಸಂಖ್ಯ ಪ್ರಮಥರ ಗಣಮೇಳ ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ತ್ರಿವಿಧ ದಾಸೋಹಿ ಡಾ.ಶಿವಮೂರ್ತಿ ಮುರುಘಾ ಶರಣರು ವಹಿಸಲಿದ್ದಾರೆ.

16ರಂದು ಬೆಳಗ್ಗೆ 7.45ಕ್ಕೆ ಬಿಬಿಎಂಪಿ ಮೇಯರ್ ಎಂ.ಗೌತಮ್‍ಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದು, ದೇಗುಲಮಠದ ಡಾ.ಶ್ರೀ ನಿರ್ವಾಣ ಸ್ವಾಮೀಜಿ, ವಿಜಯ ಮಹಂತೇಶ್ವರ ಮಠದ ಶ್ರೀ ಗುರುಮಹಾಂತ ಸ್ವಾಮೀಜಿ, ಡಾ.ಬಸವಲಿಂಗ ಪಟ್ಟದೇವರು, ಡಾ.ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಅಕ್ಕ ಅನ್ನಪೂರ್ಣ ತಾಯಿ ಮತ್ತಿತರ ಸ್ವಾಮೀಜಿಗಳು ಭಾಗವಹಿಸುತ್ತಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಚ್.ಆಂಜನೇಯ, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ, ಶಾಸಕರಾದ ಪೂರ್ಣಿಮಾ ಶ್ರೀನಿವಾಸ್, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ಭಾಗವಹಿಸುವರು.

ಬೆಳಗ್ಗೆ 10.30ಕ್ಕೆ ಜಾಗತಿಕ ಶಾಂತಿ ಮತ್ತು ಪ್ರಗತಿಗೆ ನಡೆಯುವ ಸರ್ವಶರಣರ ಸಮ್ಮೇಳನದ ದಿವ್ಯ ಸಾನ್ನಿಧ್ಯವನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಡಾ.ಶ್ರೀ ತೋಂಟದ ಸಿದ್ಧರಾಮ ಸ್ವಾಮೀಜಿ, ಆದಿಚುಂಚನಗಿರಿಯ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಆರ್ಟ್ ಆಫ್ ಲಿವಿಂಗ್‍ನ ರವಿಶಂಕರ್ ಗುರೂಜಿ, ಮಂತ್ರಾ ಲಯದ ಸುಭುದೇಂದ್ರ ತೀರ್ಥರು, ಬಸವಧರ್ಮ ಮಹಾಜಗದ್ಗುರು ಪೀಠದ ಮಾತೆ ಗಂಗಾದೇವಿ ಪಾಲ್ಗೊಳ್ಳುವರು.

ಅಸಂಖ್ಯ ಪ್ರಮಥರ ಗಣಮೇಳವನ್ನು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಡಿ.ವಿ.ಸದಾನಂದಗೌಡ, ಸುರೇಶ್ ಅಂಗಡಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಲಕ್ಷ್ಮಣ ಸವದಿ, ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀರಾಮುಲು, ಸೋಮಣ್ಣ, ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್ ಉಪಸ್ಥಿತರಿರುವರು.

ಮಧ್ಯಾಹ್ನ 3 ಗಂಟೆಗೆ ಸಂಗೀತ ಸಂಭ್ರಮ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಂಸದರಾದ ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಶಾಸಕರಾದ ಎಸ್.ಕೆ.ಸೋಮಶೇಖರ್, ಜಿ.ಎಚ್.ತಿಪ್ಪಾರೆಡ್ಡಿ ಪಾಲ್ಗೊಳ್ಳಲಿದ್ದು, ಖ್ಯಾತ ಹಿನ್ನೆಲೆ ಗಾಯಕ ವಿಜಯ್‍ಪ್ರಕಾಶ್ ಸಂಗೀತ ಸಂಭ್ರಮ ನಡೆಸಿಕೊಡಲಿದ್ದಾರೆ.

Facebook Comments