ಅಪಾರ್ಟ್‍ಮೆಂಟ್‍ಗಳಲ್ಲಿ ಕಳ್ಳತನ : ನೇಪಾಳದ ಐವರು ಸೇರಿ 6 ಮಂದಿ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.18- ಅಪಾರ್ಟ್‍ಮೆಂಟ್‍ಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ನೇಪಾಳ ಮೂಲದ ಐವರು ಸೇರಿದಂತೆ ಆರು ಮಂದಿಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿ 10.89 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ, ಕಾರು ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ.

ಎಚ್‍ಬಿಆರ್ ಲೇಔಟ್‍ನಲ್ಲಿ ಹೆಚ್ಚಾಗಿ ರಾತ್ರಿ ಕನ್ನಗಳವು ಪ್ರಕರಣಗಳು ದಾಖಲಾಗುತ್ತಿದ್ದ ಬಗ್ಗೆ ಆರೋಪಿಗಳ ಪತ್ತೆಗಾಗಿ ತಂಡ ರಚಿಸಲಾಗಿತ್ತು. ಈ ತಂಡ ವೈಜ್ಞಾನಿಕ, ತಾಂತ್ರಿಕ ಹಾಗೂ ಸ್ಥಳೀಯರ ಮಾಹಿತಿ ಸಂಗ್ರಹಿಸಿ ನೇಪಾಳ ಮೂಲದ ಐವರು ಹಾಗೂ ಸ್ಥಳೀಯನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಆರೋಪಿಗಳಿಂದ 105 ಗ್ರಾಂ ಚಿನ್ನ ಮತ್ತು 1290 ಗ್ರಾಂ ಬೆಳ್ಳಿ ವಸ್ತುಗಳು, 8 ವಿದೇಶಿ ಕರೆನ್ಸಿಗಳು, 12 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು, ಬೈಕ್ ವಶಪಡಿಸಿಕೊಂಡಿರುವ ಪೊಲೀಸರು ಮೂರು ಕನ್ನಗಳವು ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.

ರಾತ್ರಿ ವೇಳೆ ಕಳ್ಳತನ: ನೇಪಾಳ ಮೂಲದ ಐದು ಮಂದಿ ಆರೋಪಿಗಳು ಅಪಾರ್ಟ್‍ಮೆಂಟ್‍ಗಳಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, ಜೀವನ ನಡೆಸಲು ತೊಂದರೆಯಾದ್ದರಿಂದ ಕಳವು ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರ ಮಾರ್ಗದರ್ಶನದಲ್ಲಿ ಕೈಗೊಂಡಿದ್ದ ಎಸಿಪಿ ಜಗದೀಶ್, ಇನ್ಸ್‍ಪೆಕ್ಟರ್ ಪ್ರಕಾಶ್ ಅವರನ್ನೊಳ ಗೊಂಡ ತಂಡ ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾಗಿದೆ.
ಅಕಾರಿ ಮತ್ತು ಸಿಬ್ಬಂದಿಗಳ ಈ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

Facebook Comments