ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.13-ಕೊರೋನಾದಿಂದ ಗುಣಮುಖರಾದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಅವರು ನಗರದ ಖಾಸಗಿ ಆಸ್ಪತ್ರೆಯಿಂದ ಇಂದು ಡಿಸ್ ಚಾರ್ಜ್ ಆಗಲಿದ್ದಾರೆ.

ಕಳೆದ ವಾರ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕಳೆದೊಂದು ವಾರದಿಂದ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೋಜೇಗೌಡ ಅವರ ಸ್ವಾಬ್ ಟೆಸ್ಟ್ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆ ಯಿಂದ ಡಿಸ್ ಚಾರ್ಜ್ ಆಗಲಿದ್ದಾರೆ.

ಬೆಂಗಳೂರಿನಿಂದ ಚಿಕ್ಕಮಗಳೂರಿನ ಸಕ್ಕರಾಯಪಟ್ಟಣದ ತಮ್ಮ ತೋಟದ ಮನೆಗೆ ತೆರಳಲಿರುವ ಬೋಜೇಗೌಡ ಅವರು ಹತ್ತು ದಿನಗಳ ಕಾಲ ತಮ್ಮ ತೋಟದ ಮನೆಯಲ್ಲೇ ಕಾಲ ಕಳೆಯಲು ನಿರ್ಧಾರ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

Facebook Comments

Sri Raghav

Admin