ಸಚಿವ ಸೋಮಶೇಖರ್ ಅವರ ತಾಯಿಯ ಕೋರಿಗೆ ಈಡೇರಿಸಿದ ಮಾಜಿ ಸಿಎಂ ಎಸ್.ಎಂ.ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.20- ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ತಮ್ಮ ತಾಯಿ ಸೀತಮ್ಮ ತಿಮ್ಮೇಗೌಡ ಅವರ ಹುಟ್ಟುಹಬ್ಬದ ವೇಳೆ ಕೇಳಿದ ಕೊಡುಗೆಯನ್ನು ಪೂರೈಸಿರುವ ಅಚ್ಚರಿಯ ಸಂಗತಿ ಇಲ್ಲಿದೆ. ಹುಟ್ಟುಹಬ್ಬಕ್ಕೆ ಏನು ಕೊಡಬೇಕು ತಮಗೆ ಎಂದು ಸಚಿವರು ತಮ್ಮ ಮಾತೃಶ್ರೀಯವರಲ್ಲಿ ಕೇಳಿಕೊಂಡಾಗ.

ಆಗ ಅವರು ನನಗೆ ವಯಸ್ಸು 94 ಆಗುತ್ತಿದೆ. ನನಗೆ ಏನೇನು ಅವಶ್ಯಕತೆಗಳಿವೆಯೋ ಅದನ್ನೆಲ್ಲ ನೀನು ಪೂರೈಸಿದ್ದೀಯ. ಅದರೆ ನಾನು ರಾಜಕೀಯ ನಾಯಕರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಭಿಮಾನಿ. ಅವರನ್ನು ಒಮ್ಮೆ ಭೇಟಿ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು.

ಸಚಿವರು ಈ ವಿಷಯವನ್ನು ತಮ್ಮ ವಿಶೇಷ ಕರ್ತವ್ಯಾಕಾರಿ ದಿನೇಶ್ ಗೂಳಿಗೌಡ ಅವರಿಗೆ ತಿಳಿಸಿ. ಅವರು ಎಸ್.ಎಂ. ಕೃಷ್ಣ ಅವರ ಬಳಿ ಸಚಿವರ ಮಾತೃಶ್ರೀಯವರ ಹುಟ್ಟುಹಬ್ಬದ ಕೋರಿಕೆಯನ್ನು ತಿಳಿಸುತ್ತಾರೆ.

ತಮ್ಮ ಮನೆಗೆ ಯಾವಾಗ? ಯಾವ ಸಮಯಕ್ಕೆ ಸಚಿವರ ತಾಯಿಯವರನ್ನು ಕರೆದುಕೊಂಡು ಬರಬೇಕೆಂಬುದರ ಬಗ್ಗೆ ಮನವಿ ಮಾಡಿಕೊಳ್ಳುತ್ತಾರೆ. ಇದನ್ನು ಕೇಳಿದ ಎಸ್.ಎಂ. ಕೃಷ್ಣ ಅವರು ಸಚಿವರ ಮಾತೃಶ್ರೀಯವರು ನನಗಿಂತ ಹಿರಿಯರು. ಹಾಗಾಗಿ ಅವರು ನಮ್ಮ ಮನೆಗೆ ಬರುವುದು ಉಚಿತವಲ್ಲ. ಹಾಗಾಗಿ ನಾನೇ ಅವರ ಮನೆಗೆ ಬಂದು ಭೇಟಿ ಮಾಡುತ್ತೇನೆ ಎಂದು ಹೇಳಿ ಅವರೇ ಖುದ್ದು ಅವರ ಮನೆಗೆ ಭೇಟಿ ನೀಡಿದ್ದಾರೆ.

ಕೊಟ್ಟ ಮಾತಿನಂತೆ ನಿನ್ನೆ ರಾತ್ರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ ಅವರು ಭೇಟಿ ನೀಡಿ ಸೀತಮ್ಮ ಅವರ ಆಸೆಯನ್ನು ಈಡೇರಿಸಿ. ಕೆಲಕಾಲ ಅವರ ಜತೆ ಮಾತುಕತೆ ನಡೆಸಿ ಕುಶಲೋಪರಿ ವಿಚಾರಿಸಿದ್ದಾರೆ.

ಇತ್ತ ತಮ್ಮ ತಾಯಿಯ ಕೋರಿಕೆಯನ್ನು ನೆರವೇರಿಸಲು ಕೃಷ್ಣ ಅವರೇ ತಮ್ಮ ಮನೆಗೆ ಆಗಮಿಸಿದ್ದಕ್ಕೆ ಸೋಮಶೇಖರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ವೇಳೆ ರಾಧಾ ಸೋಮಶೇಖರ್ ಹಾಗೂ ಪುತ್ರ ನಿಶಾಂತ್ ಸೋಮಶೇಖರ್ ಹಾಜರಿದ್ದರು.

Facebook Comments