ಸಿದ್ದರಾಮಯ್ಯ ಬಹಿರಂಗ ಕ್ಷಮೆಯಾಚಿಸಲಿ : ಸೊಗಡು ಶಿವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಡಿ.10-ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆರೋಪಗಳ ಮಾಡುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಹಿರಂಗ ಕ್ಷಮೆ ಕೇಳಲಿ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಮಿನಿ ಸಮರದಲ್ಲಿ ಅಭೂತಪೂರ್ವ ಗೆಲುವು ಬಿಜೆಪಿ ಸಾಧಿಸಿದ್ದು ಚುನಾವಣೆ ವೇಳೆ ಬಿಎಸ್‍ವೈ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಸಿದ್ದರಾಮಯ್ಯ ಜನರ ಕ್ಷಮೆ ಕೇಳಲಿ ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಅವರನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕರಿಗೆ ಮುಖಭಂಗವಾಗಿದೆ. ಜನರೇ ಅವರನ್ನು ಗೃಹಬಂಧನದಲ್ಲಿರಿಸಿದ್ದಾರೆ. ಕನಕದಾಸರಿಗೆ ಅವಮಾನ ಮಾಡುವಂತೆ ಸಿದ್ದು ಜಾತಿ ವಿಭಜನೆ ಮಾಡಿದ್ದು ಆ ಸಮುದಾಯದಲ್ಲಿ ಹುಟ್ಟಿರುವುದೇ ತಪ್ಪು. ಯೋಗ್ಯತೆಯಿಲ್ಲದಿದ್ದರೆ ರಾಜಕೀಯ ನಿವೃತ್ತಿ ಹೊಂದಲಿ ಎಂದು ಛೇಡಿಸಿದರು.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವು ನಂಬಿಕೆ ಇಟ್ಟು ಕೊಂಡು ಕೆಲಸ ಮಾಡುತ್ತೇವೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರನ್ನು ಕೈ ಬಿಡುವ ಅವಶ್ಯಕತೆಯಿಲ್ಲ. ನಾನು ಯಾವುದೇ ನಿಗಮ ಮಂಡಳಿಯ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದರು.

ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳ ಅವ್ಯವಹಾರ ಸಂಬಂಧಪಟ್ಟಂತೆ ಸದ್ಯದಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶಾಲಿನಿ ರಜನೀಶ್ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ಸೊಗಡು ಶಿವಣ್ಣ ಹೇಳಿದರು.

Facebook Comments