ಸಾರಿಗೆ ನೌಕರರ ದಿಕ್ಕು ತಪ್ಪಿಸಿದ ಕೋಡಿಹಳ್ಳಿಚಂದ್ರಶೇಖರ್: ಸೊಗಡು ಶಿವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಡಿ.14- ಕಳೆದ ನಾಲ್ಕು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ಹಲವಾರು ಸಮಸ್ಯೆಗಳನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್‍ನಂತಹ ಕಷ್ಟದ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವುದು ಸೂಕ್ತವಲ್ಲ. ಕಾನೂನು ಸುವ್ಯವಸ್ಥೆ ಹದಗೆಡಿಸಿ ನೌಕರರನ್ನು ದಿಕ್ಕು ತಪ್ಪಿಸಿ ರಾಜ್ಯದ ಜನರಿಗೆ ತೊಂದರೆ ಕೂಡುವುದು ಸರಿಯಲ್ಲ. ದೂರದ ಊರಿಗೆ ಹೋಗುವವರಿಗೆ, ಕೆಲಸಕ್ಕೆ ಹೋಗುವವರಿಗೆ ಭಾರೀ ಅನಾನುಕೂಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಸ್‍ಆರ್‍ಟಿ ಸಿ , ಬಿಎಂಟಿಸಿ ನೌಕರರ ದಿಕ್ಕು ತಪ್ಪಿಸುವ ಕೆಲಸವನ್ನು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ತಕ್ಷಣವೇ ಬಂಧಿಸುವಂತೆ ಅವರು ಒತ್ತಾಯಿಸಿದ್ದಾರೆ. ನಿಗಮದಲ್ಲಿ ನೌಕರರಿಗೆ ತೊಂದರೆ ಕೊಟ್ಟರೆ ಸಹಿಸಲು ಸಾಧ್ಯವಿಲ್ಲ. ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು, ನಾನು ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.

ಕೋಡಿಹಳ್ಳಿ ಚಂದ್ರಶೇಖರ್ ರೈತರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಅದರ ಬಗ್ಗೆ ಕೆಲಸ ಮಾಡಲಿ. ರೈತರು ಸಾಕಷ್ಟು ಸಂಕಷ್ಟದಲ್ಲಿ ತೊಡಗಿಕೊಂಡಿದ್ದಾರೆ. ಅದರ ಬಗ್ಗೆ ಅರಿವಿಲ್ಲದ ಚಂದ್ರಶೇಖರ್ ನಿಗಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕೆಂಡಾಮಂಡಲರಾದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಕೆ.ಪಿ.ಮಹೇಶ್ ಸೇರಿದಂತೆ ಮತ್ತಿತರರಿದ್ದರು.

Facebook Comments