31 ಸಾವಿರ ಮನೆಗಳ ನಿರ್ಮಾಣಕ್ಕೆ 183 ಕೋಟಿ ರೂ ಬಿಡುಗಡೆ : ಸಚಿವ ವಿ.ಸೋಮಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.16- ರಾಜ್ಯದಲ್ಲಿ 31ಸಾವಿರ ಮನೆಗಳಿಗೆ 183 ಕೋಟಿ ರೂ.ಗಳು ಬಿಡುಗಡೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಿ.ಎಸ್.ಹೂಲಗೇರಿ ಅವರ ಪರವಾಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರ್ಹ ಫಲಾನುಭವಿಗಳ ಖಾತೆಗೆ ಈ ಹಣವನ್ನು ಬಿಡುಗಡೆ ಮಾಡಲಾಗಿದೆ.

ವಿವಿಧ ವಸತಿ ಯೋಜನೆಯಡಿ ಮನೆ ನಿರ್ಮಾಣದ ಪ್ರಗತಿಯ ಮಾಹಿತಿ ಪಡೆಯುವ ಸಂಬಂಧ ಶಾಸಕರಿಗೆ ಪತ್ರ ಬರೆದು ವಿಧಾನಸಭಾ ಕ್ಷೇತ್ರವಾರು ಮಾಹಿತಿ ಪಡೆಯಲಾಗುವುದು ಎಂದರು. ಅರ್ಹರು ಬಿಟ್ಟು ಹೋಗಿದ್ದರೆ ಅವಕಾಶ ಕಲ್ಪಿಸಲಾಗುವುದು. ಹಣದ ಕೊರತೆಯಿಂದ ಯಾವುದೇ ಮನೆ ನಿರ್ಮಾಣ ವಿಳಂಬವಾಗಿಲ್ಲ.

ವಿವಿಧ ವಸತಿ ಯೋಜನೆಯಡಿ ತಾಲ್ಲೂಕುವಾರು ಪಟ್ಟಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಕಾರ್ಯನಿರ್ವಹಣಾಧಿಕರಿಗೆ ಕಳೆದ ನವೆಂಬರ್‍ನಲ್ಲೇ ಆದೇಶ ನೀಡಲಾಗಿದೆ. ಈ ಸಂಬಂಧ 53 ಸಾವಿರ ಮನೆಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಅಂಬೇಡ್ಕರ್, ವಾಜಪೇಯಿ, ಬಸವ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಅನಾನುಕೂಲವಾಗಬಾರದು ಎಂಬ ಉದ್ದೇಶದಿಂದ ಉಪ ಸಮಿತಿಯನ್ನು ಕೂಡ ರಚಿಸಲಾಗಿದೆ ಎಂದು ಹೇಳಿದರು.

Facebook Comments