ಕುಮಾರಸ್ವಾಮಿ ಮೇಲೆ ಸೋಮಣ್ಣ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.22-ಮುಖ್ಯಮಂತ್ರಿಯಾಗಿ ರಾಜ್ಯದ ಆಡಳಿತ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಗಳೂರು ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿಯಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಗಂಟೆಗೊಂದು ಹೇಳಿಕೆ ನೀಡುವ ಮೂಲಕ ಅನಗತ್ಯ ಗೊಂದಲವನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕುಮಾರಸ್ವಾಮಿಯವರದ್ದು, ಹಿಟ್ ಅಂಡ್ ರನ್ ಸಂಸ್ಕøತಿಯಾಗಿದೆ ಎಂದು ಟೀಕಿಸಿದ ಸಚಿವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿಯವರಿಗೆ ಸರಿಯಾದ ತರಬೇತಿ ನೀಡಿಲ್ಲ ಎಂದರು.

Facebook Comments