ರಾಜಕೀಯವಾಗಿ ಅಸ್ತಿತ್ವ ಉಳಿಸಿಕೊಳ್ಳಲು ಅಹಿಂದ ಕೂಗು

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.13- ರಾಜಕೀಯಕ್ಕಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಅಹಿಂದ ಕೂಗು ಎಬ್ಬಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಜಿಲ್ಲಾ ಪ್ರತಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ರಾಜ್ಯದಲ್ಲಿ ಅಹಿಂದ ಹೋರಾಟ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಕ್ರಿಯಿಸಿ, ಸದ್ಯಕ್ಕೆ ಇದು ಅಪ್ರಸ್ತುತ, ಚುನಾವಣೆ ಕೂಡಾ ಇನ್ನೂ ತುಂಬಾ ದೂರ ಇದೆ ಎಂದರು.

ಅಹಿಂದ ಕೂಗು ಎತ್ತುತ್ತಿರುವವರು ರಾಜಕೀಯವಾಗಿ ಮೂಲೆ ಗುಂಪಾಗಿದ್ದಾರೆ. ರಾಜಕೀಯಕ್ಕಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಅಹಿಂದ ಕೂಗು ಎತ್ತಿದ್ದಾರೆ ಎಂದು ಹೇಳಿದ ಅವರು, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಜೊತೆ ನನ್ನ ವಿಶ್ವಾಸ ಈಗಲೂ ಹಾಗೆ ಉಳಿದುಕೊಂಡಿದೆ. ಪರಸ್ಪರ ವೈಯುಕ್ತಿಕವಾಗಿ ವಿಶ್ವಾಸದಿಂದಿ ದ್ದೇವೆಯೇ ಹೊರತು ರಾಜಕೀಯ ವಾಗಲ್ಲ. ನಾನು 5 ವರ್ಷ ಅವರ ಜೊತೆ ಕೆಲಸ ಮಾಡಿದ್ದೇನೆ. ಈಗ ಬಿಜೆಪಿಯಲ್ಲಿ ಇದ್ದೇನೆ ಇಲ್ಲೂ ವಿಶ್ವಾಸದಿಂದ ಕೆಲಸಮಾಡುತ್ತೇನೆ ಎಂದರು.

ಪೆಟ್ರೋಲ್ ಡಿಸೇಲ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ವರಮಾನ ಕಮ್ಮಿಯಾಗಿದೆ. ಹಾಗಾಗಿ ಪೆಟ್ರೋಲ್ ಮೇಲಿನ ಸೆಸ್ ಹೆಚ್ಚಿಸಲಾಗಿದೆ. ಪೆಟ್ರೋಲ್ ಹಾಗೂ ಡಿಸೇಲ್‍ಗಳ ದರ ಏರಿಳಿತ ಸರ್ವೇ ಸಾಮಾನ್ಯ ಎಂದು ಹೇಳಿದರು.

ಮೇಯರ್ ಚುನಾವಣೆಯಲ್ಲಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ರಾಜ್ಯಮಟ್ಟದ ನಾಯಕರ ಜೊತೆ ಮಾತುಕತೆ ಆಗಿದೆ. ಆದರೆ ಸ್ಥಳೀಯ ಮಟ್ಟದ ನಾಯಕರ ಜೊತೆ ಇನ್ನೂ ಚರ್ಚೆ ಮಾಡಿಲ್ಲ. ಸ್ಥಳೀಯ ನಾಯಕರ ಅಭಿಪ್ರಾಯ ವನ್ನೂ ಕೂಡ ಪಡೆದು ಕೊಳ್ಳಬೇಕು. ಜೊತೆಗೆ ಬಿಜೆಪಿ ಯವರೇ ಮೇಯರ್ ಆಗಬೇಕೆಂಬ ವಿಚಾರ ಮುಂಚೂಣಿಯಲ್ಲಿದೆ. ಈ ಬಗ್ಗೆ ಕೂಡಾ ಸಾಕಷ್ಟು ಚರ್ಚೆ ಆಗುತ್ತಿದೆ. ಕೇಂದ್ರ ಮಂಡಿಸಿದ ಬಜೆಟ್ ಭಾರತವನ್ನು 2025ರ ವೇಳೆಗೆ 5 ಟ್ರಿಲಿಯನ್ ಆರ್ಥಿಕ ವ್ಯವಸ್ಥೆಯತ್ತ ಒಯ್ಯಲಿದೆ ಎಂದವರು ತಿಳಿಸಿದರು.

ಇದೊಂದು ಐತಿಹಾಸಿಕ ಬಜೆಟ್ ಎಂದು ಬಣ್ಣಿಸಿದ ಸಚಿವರು, ಕೃಷಿ ಉತ್ಪಾದನೆ ಪ್ರಮಾಣ ಹೆಚ್ಚಳ, ಮೂಲಸೌಕರ್ಯ ಹೆಚ್ಚಳ, ಆರೋಗ್ಯ ಕ್ಷೇತ್ರದಲ್ಲಿ ಸೌಕರ್ಯ ವೃದ್ಧಿಗೆ ಇದು ಪೂರಕ ಎನಿಸಲಿದೆ. ಎರಡನೇ ವಿಚಾರ ಕಷ್ಟದಾಯಕವಿದ್ದರೂ ಜನರ ಹಿತದೃಷ್ಟಿಯಿಂದ ಈ ವಿಚಾರವನ್ನು ಆಯ್ಕೆ ಮಾಡಲಾಗಿದೆ. ಅಂತಾ ರಾಷ್ಟ್ರೀಯ ಹಣಕಾಸು ನಿಧಿಯೂ (ಐಎಂಎಫ್) ಭಾರತವು ಅತಿ ವೇಗದಿಂದ ಅಭಿವೃದ್ಧಿ ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದೆ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷರಾ ದ ಶ್ರೀವತ್ಸ, ಮಂಗಳಾ ಸೋಮಶೇಖರ್, ಶಾಸಕ ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಉಪಸ್ಥಿತರಿದ್ದರು.

Facebook Comments