ಪೆಟ್ರೋಲ್ ದರ ಏರಿಕೆ ನಿಲ್ಲಿಸುವಂತೆ ಪ್ರಧಾನಿಗೆ ಸೋನಿಯಾ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

ಶಹದೋಲ್, ಜೂ.14- ದೇಶದಲ್ಲಿ ಸತತ 10 ದಿನಗಳಿಂದ ಏರುಗತಿಯಲ್ಲಿರುವ ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಸೋನಿಯಾ, ಕೊರೊನಾ ವೈರಸ್ ಹಾವಳಿ ಬಿಕ್ಕಟ್ಟಿನ ಸಂದರ್ಭದಲ್ಲೇ ಇಂಧನ ದರ ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವು ಸಂವೇದನಾರಹಿತ ಮತ್ತು ವಿವೇಚನೆ ಇಲ್ಲದ ಕ್ರಮ ಎಂದು ಟೀಕಿಸಿದ್ದಾರೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಕಳೆದ ವಾರ ಶೇ.9ರಷ್ಟು ಇಳಿಕೆಯಾಗಿದ್ದರೂ, ಅದರ ಪ್ರಯೋಜನವನ್ನು ಜನರಿಗೆ ನೀಡುವ ಬದಲು ಸರ್ಕಾರವು ಬೆಲೆ ಏರಿಕೆಯ ಹೊರೆ ಹಾಕಿದೆ ಎಂದು ಎಐಸಿಸಿ ಅಧ್ಯಕ್ಷರು ಆರೋಪಿಸಿದ್ದಾರೆ. ಇಂಥ ಸಂಕಷ್ಟ ಸನ್ನಿವೇಶದಲ್ಲಿ ಇಂಧನ ದರ ಏರಿಕೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಈ ಕೂಡಲೇ ಇದನ್ನು ಹಿಂಪಡೆಯಬೇಕೆಂದು ಸೋನಿಯಾ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

Facebook Comments