Saturday, April 20, 2024
Homeರಾಷ್ಟ್ರೀಯರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ

ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ

ನವದೆಹಲಿ/ಜೈಪುರ, ಫೆ.14 : ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಣಕ್ಕಿಳಿದಿದ್ದಾರೆ. ಐದು ಭಾರಿ ಲೋಕಸಭೆ ಸಂಸದರಾಗಿ ಸೇವೆ ಸಲ್ಲಿಸಿರುವ 77 ವರ್ಷದ ಕಾಂಗ್ರೆಸ್ ನಾಯಕಿ ಮೊದಲ ಬಾರಿಗೆ ಮೇಲ್ಮನೆ ಪ್ರವೇಶಿಸಲಿದ್ದು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಕಳೆದ ಕೆಲವು ದಿನಗಳಿಂದ ಸೋನಿಯಾ ಗಾಂಧಿ ಅವರು ಕರ್ನಾಟಕ,ತೆಲಂಗಾಣ ,ಮಧ್ಯಪ್ರದೇಶ ಸೇರಿ ಹಲವು ರಾಜ್ಯಗಳಿಂದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು,ಈಗ ಇದೆಲ್ಲದಕ್ಕೂ ತೆರೆ ಬೀಳಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಂದು ಸೋನಿಯಾಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರ ಜೊತೆಗೂಡಿ ಜೈಪುರಕ್ಕೆ ಆಗಮಿಸಿ ವಿಧಾನಸಭೆ ಸಚಿವಾಲಯದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಒಮ್ಮ ಕರ್ನಾಟಕದ ಬಳ್ಳಾರಿ ನಂತರ ಉತ್ತರ ಪ್ರದೇಶದ ರಾಯ್ ಬರೇಲಿಯನ್ನು ಪ್ರತಿನಿಧಿಸಿ 5 ಬಾರಿ ಸದಸ್ಯರಾಗಿದ್ದಾರೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈ ಮೊದಲೇ ಹೇಳಿದ್ದರು. ಪ್ರಸ್ತುತ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಏಪ್ರಿಲ್‍ನಲ್ಲಿ ನಿವೃತ್ತರಾಗುತ್ತಿದ್ದು, ಫೆಬ್ರವರಿ 27 ರಂದು ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ.

ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ

ಪ್ರಸ್ತುತ 4 ರಾಜ್ಯಗಳಿಗೆ ಮಾತ್ರ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಅದರಂತೆ ರಾಜಸ್ಥಾನದಿಂದ ಸೋನಿಯಾಗಾಂಧಿ, ಬಿಹಾರದಿಂದ ಡಾ.ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಗ್ವಿ ಹಾಗೂ ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರಿ ಅವರು ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಳಿದ ರಾಜ್ಯಗಳಿಗೆ ಇಂದು ರಾತ್ರಿಯೊಳಗೆ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದೆ.

ತೆಲಂಗಾಣ ಮತ್ತು ಕರ್ನಾಟಕದಲ್ಲಿ ಅತೀ ಹೆಚ್ಚು ಸ್ಥಾನ ಗಳಿಸುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಾನಾ ಕಸರತ್ತು ನಡೆಸಿದೆ. ರಾಜಸ್ಥಾನ ರಾಜ್ಯದಿಂದ 3 ಸ್ಥಾನಗಳು ತೆರವಾಗಲಿದ್ದು, ಅದರಲ್ಲಿ ಒಂದು ಸ್ಥಾನವನ್ನು ಗೆಲ್ಲಲು ಕಾಂಗ್ರೆಸ್‍ಗೆ ಸುಲಭವಾಗಿದೆ. ಉಳಿದೆರಡು ಸ್ಥಾನಗಳು ಬಿಜೆಪಿ ಪಾಲಾಗಲಿದೆ. ಈಗಾಗಲೆ ಇದೇ ರಾಜ್ಯದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೂಡ ರಾಜ್ಯ ಸಭೆ ಸದಸ್ಯರಾಗಿದ್ದರು. ಆರು ವರ್ಷಗಳ ಅಧಿಕಾರಾವಧಿಯನ್ನು ಏಪ್ರಿಲ್‍ನಲ್ಲಿ ಪೂರ್ಣಗೊಳಿಸಿದ ನಂತರ ಸ್ಥಾನ ತೆರವಾಗಲಿದೆ.

ಅವರು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ಮೇಲ್ಮನೆ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ನಂತರ ರಾಜ್ಯಸಭೆಗೆ ಪ್ರವೇಶಿಸಿದ ಗಾಂಧಿ ಕುಟುಂಬದ ಎರಡನೇ ಸದಸ್ಯರಾಗಿದ್ದಾರೆ.ಈ ಬಾರಿ ಸೋನಿಯಾ ಗಾಂಧಿ ಅವರು ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಹೊರಗುಳಿದ ನಂತರ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬರುತ್ತಿದೆ.

ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ

RELATED ARTICLES

Latest News