ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸೂದ್

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಸೆ. 21- ಕೊರೊನಾದಿಂದ ಬಳಲುತ್ತಿರುವ ಸಂತ್ರಸ್ತರಿಗೆ ನೆರವು ನೀಡುತ್ತಾ ಬಂದಿರುವ ಬಾಲಿವುಡ್ ನಟ ಸೋನು ಸೂದ್ ಈಗ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಮುಂದಾಗಿದ್ದಾರೆ.

ತಮ್ಮ ತಾಯಿಯ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಸೋನು ಮುಂದಾಗಿದ್ದು, ಈ ನಡುವೆ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಶಸ್ತ್ರಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ್ದಾರೆ.

ಅರ್ಜುನ್ ಚೌಹಣ್ ಎಂಬುವವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ನೆರವು ನೀಡುವಂತೆ ಸೋನುಸೂದ್‍ಗೆ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನಟ ಸೋನು ಸೂದ್ ನಿಮ್ಮ ದಾಖಲೆಯನ್ನು ಪರಿಶೀಲಿಸಿದ್ದು ಕರ್ನೂಲ್‍ನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸುವುದಾಗಿ ಭರವಸೆ ನೀಡಿ ಆ ವ್ಯಕ್ತಿಗೆ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಅರ್ಜುನ್‍ಚೌಹಣ್‍ರ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಸೋನು ನಮ್ಮ ಪಾಲಿನ ನಿಜವಾದ ದೇವರು ಎಂದು ಬಣ್ಣಿಸಿದ್ದಾರೆ.

Facebook Comments