ದಕ್ಷಿಣ ಆಫ್ರಿಕಾದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.4-ಓಮಿಕ್ರಾನ್ ವೈರಸ್ ನಗರದಲ್ಲಿ ಪತ್ತೆಯಾದಾಗಿನಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ದ.ಆಫ್ರಿಕಾದಿಂದ ಬಂದವರ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 23ರಿಂದಲೇ ಕಠಿಣ ನಿಯಮವನ್ನು ಜಾರಿ ಮಾಡಲಾಗಿದೆ. ನವೆಂಬರ್‍ನಲ್ಲಿ ನಗರಕ್ಕೆ ಬಂದಿರುವ ಎಲ್ಲರನ್ನು ಪತ್ತೆ ಮಾಡುವ ಕೆಲಸ ಮಾಡಲಾಗುತ್ತಿದೆ.

ದ.ಆಫ್ರಿಕಾದಿಂದ ಬಂದ ಎಲ್ಲರನ್ನು ಈಗ ಪತ್ತೆ ಮಾಡಲಾಗಿದೆ. ಪತ್ತೆಯಾದವರಿಗೆ ಕೋವಿಡ್ ಟೆಸ್ಟ್ ಕೂಡ ಮಾಡಲಾಗಿದೆ. ಓಮಿಕ್ರಾನ್ ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚಿ ಟೆಸ್ಟ್ ಮಾಡಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿದೆ. ಎರಡು ಡೋಸ್ ಪಡೆಯದಿದ್ದರೆ ಸಾರ್ವಜನಿಕ ಪ್ರದೇಶಗಳಿಗೆ ಪ್ರವೇಶವಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ ಎಂದು ಹೇಳಿದರು.

ಬೂಸ್ಟರ್ ಡೋಸ್ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಆರೋಗ್ಯ ಕರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವಂತೆ ಸಲಹೆ ಬಂದಿದೆ. ಈ ಬಗ್ಗೆ ನಮ್ಮ ಅಭಿಪ್ರಾಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಹೇಳಿದರು.

Facebook Comments