4 ಕೋಟಿ ಮೌಲ್ಯದ ಗಾಂಜಾ ವಶ, ಸಹಶಿಕ್ಷಕ ಸೇರಿ ಐವರ ಸೆರೆ..!

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಸೆ.16-ಹೊಲದಲ್ಲಿ ಗಾಂಜಾ ಬೆಳೆದಿದ್ದ ಸಹಶಿಕ್ಷಕ ಸೇರಿದಂತೆ ಐವರನ್ನು ಬಂಧಿಸಿ, 4 ಕೋಟಿ ಮೌಲ್ಯದ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‍ಪಿ ಜಿ.ರಾಧಿಕಾ ತಿಳಿಸಿದರು.

ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿಯ ರುದ್ರೇಶ(45), ಮಹದೇವಪುರ ಗ್ರಾಮದ ಸಮಂತಗೌಡ(42), ಭೂ ಮಾಲೀಕ ಸಹ ಶಿಕ್ಷಕ ವೈ.ಜಂಬುನಾಥ(50), ಹೊಟೇಲ್ ಮಾಲೀಕ ಡಿ.ಬಿ.ಮಂಜುನಾಥ(45) ಹಾಗೂ ಡಿ.ವೈ ಮಂಜುನಾಥ(48) ಇವರುಗಳನ್ನು ಬಂಧಿಸಲಾಗಿದೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಮೊಳಕಾಲ್ಮೂರು ತಾಲ್ಲೂಕು ವಡೇರಹಳ್ಳಿ ಗ್ರಾಮದ ಜಮೀನಿನಲ್ಲಿ ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ ಗಾಂಜಾಗಿಡಗಳನ್ನು ಬೆಳೆದು ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ 9872 ಕೆ.ಜಿ. ತೂಕದ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು 4 ಕೋಟಿ ಎಂದು ಅಂದಾಜಿಸಲಾಗಿದೆ.

ಅಲ್ಲದೆ ಗಾಂಜಾ ಗಿಡಗಳ ಪತ್ತೆ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯ ಮೆಚ್ಚಿ ಸೂಕ್ತ ಬಹುಮಾನ ಘೋಷಿಸಲಾಗಿದೆ.

Facebook Comments