ಕೆಟ್ಟುಹೋದ ವಿಧಾನಪರಿಷತ್ತಿನ ಸಿಸಿಟಿವಿಗಳು, ಸಭಾಪತಿ ಹೊರಟ್ಟಿ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.1-ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯ ನಿರ್ವಹಿಸದಿರುವುದಕ್ಕೆ ಕೆಂಡಾಮಂಡಲಗೊಂಡಿರುವ ನೂತನ ಸಭಾಪತಿ ಬಸವರಾಜ ಹೊರಟ್ಟಿಯವರು ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಅವರು, ಸಚಿವಾಲಯದಲ್ಲಿ ಅಳವಡಿಸಲಾಗಿರುವ ಹಲವು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ.

ಅವುಗಳನ್ನು ಉದ್ದೇಶಪೂರ್ವಕವಾಗಿ ಕೆಲವರು ಹಾಳು ಮಾಡುತ್ತಿರುವ ದೂರುಗಳು ಬರುತ್ತಿವೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಟ್ಟಡದಲ್ಲಿ ಒಟ್ಟಾರೆ 36 ಸಿಸಿಟಿವಿಗಳಿವೆ. ಆದರೆ, ಇದರಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯ ನಿರ್ವಹಿಸುತ್ತಿಲ್ಲ.

ವಾರ್ಷಿಕ ನಿರ್ವಹಣೆಯನ್ನು ಸೂಕ್ತ ರೀತಿ ಮಾಡುತ್ತಿಲ್ಲ. ನೀವು ಕಾರ್ಯದರ್ಶಿಯಂತಹ ಉನ್ನತ ಹುದ್ದೆಯಲ್ಲಿರುವುದರಿಂದ ಮುಲಾಜಿಲ್ಲದೆ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಆ ಮೂಲಕ ಆಡಳಿತವನ್ನು ಚುರುಕುಗೊಳಿಸಬೇಕು. ಟಿಪ್ಪಣಿಯಲ್ಲಿ ಸೂಚಿಸಿರುವ ಎಲ್ಲ ಅಂಶಗಳನ್ನು ಜಾರಿಗೊಳಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಂಡು ಕಾರ್ಯರೂಪಕ್ಕೆ ತರಬೇಕು ಎಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಇದಲ್ಲದೆ ಪರಿಷತ್ತಿನಲ್ಲಿ ಇಲಿಗಳ ಕಾಟ ಕೂಡ ಇದ್ದು, ಕೇಬಲ್, ವೈಯರ್‍ಗಳನ್ನು ಹಾಳು ಮಾಡುತ್ತಿವೆ. ಪರಿಷತ್ತಿನಲ್ಲಿ 300 ನೌಕರರು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಬಹುತೇಕ ಜನರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಸ್ಥಗಿತಗೊಳಿಸಲಾಗಿದೆ. ಕೆಲವರು ಇದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಹೀಗಾಗಿ ಶಿಸ್ತು ಪಾಲನೆ ಮಾಡಲು ಕಟ್ಟುನಿಟ್ಟಿನ ನಿಯಮ ಜಾರಿಗೆ ತರಬೇಕಿದೆ. ಡಿ-ಗ್ರೂಪ್ ನೌಕರರು ಸಮವಸ್ತ್ರಗಳನ್ನು ಧರಿಸಬೇಕು. ಆದರೆ, ಸಾಮಾನ್ಯ ರಿಸಿನಲ್ಲಿ ಬರುತ್ತಿರುವುದು ಗಮನಕ್ಕೆ ಬಂದಿದೆ. ನೌಕರರಿಗೆ ಸಮವಸ್ತ್ರಕ್ಕಾಗಿ ಪ್ರತಿ ತಿಂಗಳೂ ಹಣ ನೀಡಲಾಗುತ್ತಿದೆ. ಮಾರ್ಚ್ ಮೊದಲ ವಾರದಿಂದ ಅವೇಶನ ನಡೆಯಲಿದ್ದು, ಅಷ್ಟರೊಳಗಾಗಿ ಸಿಸಿಟಿವಿ, ಬಯೋಮೆಟ್ರಿಕ್ ಹಾಜರಾತಿ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಪತ್ರದಲ್ಲಿ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಸಭಾಪತಿಗಳ ಪತ್ರದ ಹಿನ್ನೆಲೆಯಲ್ಲಿ ಕಟ್ಟುನಿಟ್ಟನ ಕ್ರಮಕ್ಕೆ ಮುಂದಾಗಿರುವ ವಿಧಾನಪರಿಷತ್ ಕಾರ್ಯದರ್ಶಿಗಳು ಇದೀಗ ಕಾರಿಡಾರ್‍ಗಳಲ್ಲಿ ನೌಕರರು ಮೊಬೈಲ್ ಫೋನ್‍ಗಳನ್ನು ಬಳಕೆ ಮಾಡುವುದನ್ನು ನಿಷೇಸಿದ್ದಾರೆ. ಅಲ್ಲದೆ, ಡಿ ಗ್ರೂಪ್ ನೌಕರರು ಮಾರ್ಚ್ 1ರಿಂದ ಸಮವಸ್ತ್ರ ಧರಿಸುವುದನ್ನು ಕಡ್ಡಾಯ ಮಾಡಿದ್ದಾರೆಂದು ತಿಳಿದು ಬಂದಿದೆ.

Facebook Comments

Sri Raghav

Admin