ರಾಜಸ್ಥಾನ ಕಾಂಗ್ರೆಸ್ ಶಾಸಕರ ಅನರ್ಹತೆ ವಿಚಾರಣೆ ಮುಂದೂಡಿದ ಹೈಕೋರ್ಟ್, ಸುಪ್ರೀಂನಲ್ಲಿ ಸ್ಪೀಕರ್ ಮೇಲ್ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಜೈಪುರ್, ಜು.22- ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ರಾಜಸ್ಥಾನ ಕಾಂಗ್ರೆಸ್ ಶಾಸಕರ ಅನರ್ಹತೆ ವಿಚಾರದ ವಿಚಾರಣೆಯನ್ನು ಶುಕ್ರವಾರದವರೆಗೆ ಮುಂದೂಡಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ರಾಜಸ್ಥಾನ ಸ್ಪೀಕರ್ ತೀರ್ಮಾನಿಸಿದ್ದಾರೆ.

ತಮ್ಮ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ತೀರ್ಮಾನದ ವಿರುದ್ಧ ಸಚಿನ್ ಪೈಲಟ್ ಸೇರಿದಂತೆ 18 ಭಿನ್ನಮತಿಯ ಶಾಸಕರು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಾದ ವಿವಾದ ಆಲಿಸಿದ ನ್ಯಾಯಾಲಯ ಶುಕ್ರವಾರದವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಆದೇಶಿಸಿತ್ತು. ಹೈ ಕೋರ್ಟ್ ನ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸ್ಪೀಕರ್ ಸಿ.ಪಿ.ಜೋಷಿ ತಿಳಿಸಿದ್ದಾರೆ.

ವಿಚಾರಣೆ ಮುಗಿಯುವವರೆಗೆ ಸರ್ಕಾರದ ಪತನಕ್ಕೆ ಯತ್ನಿಸಿದ ಭಿನ್ನಮತಿಯರ ವಿರುದ್ಧ ಕ್ರಮ ಕೈಗೊಳ್ಳದಿರುವಂತೆ ಹೈಕೋರ್ಟ್ ತೀರ್ಪಿನಿಂದ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಜೋಷಿ ಈ ನಿರ್ಧಾರಕ್ಕೆ ಬಂದಿದ್ದಾರೆ.

Facebook Comments

Sri Raghav

Admin