ಯಥಾರೀತಿ ಸ್ಥಾಯಿ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 12- ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ಯಥಾರೀತಿ ನಡೆಸಲು ವಿಧಾನ ಸಭಾಧ್ಯಕ್ಷ ರಮೇಶ್‍ಕುಮಾರ್ ಸೂಚಿಸಿದ್ದಾರೆ.

ಭಾರತದ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಿ ನೀತಿ-ಸಂಹಿತೆ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಳೆದ ಮಾ.11ರಿಂದ ರಾಜ್ಯ ವಿಧಾನಮಂಡಲದ ಹಾಗೂ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ನಡೆಸದಂತೆ ಸಭಾಧ್ಯಕ್ಷರು ನಿರ್ದೇಶನ ನೀಡಿದ್ದರು.

ಹೀಗಾಗಿ ಕಳೆದ ಎರಡು ತಿಂಗಳಿನಿಂದ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳು ನಡೆದಿರಲಿಲ್ಲ. ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳ ಸಭೆಗಳನ್ನು ನಡೆಸಬಹುದಾಗಿದೆ ಎಂದು ಸಭಾಧ್ಯಕ್ಷರು ಸೂಚಿಸಿದ್ದಾರೆ.

ಈ ಸಂಬಂಧ ವಿಧಾನಸಭೆ ಸಚಿವಾಲಯ ಎಲ್ಲ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗೂ ಶಾಸಕರಿಗೆ ಮಾಹಿತಿ ರವಾನೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin