ಜನ ಸಾಮಾನ್ಯರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಎತ್ತಿ: ರಾಹುಲ್ ಗಾಂಧಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 11- ಕೊರೊನಾ ಸೋಂಕಿತರಿಗೆ ಅನಿರ್ಬಂಧಿತ ಆಮ್ಲಜನಕ ಪೂರೈಕೆ ಮತ್ತು ಎಲ್ಲರಿಗೂ ಉಚಿತ ಲಸಿಕೆ ಹಾಕಲು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಸಾಂಕ್ರಾಮಿಕ ರೋಗ ಹರಡುತ್ತಿರುವ ದುರಿತ ಕಾಲದಲ್ಲಿ ಜನ ತಮ್ಮ ಧ್ವನಿಯನ್ನು ಎತ್ತಬೇಕಿದೆ ಎಂದು ಹೇಳಿರುವ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ, ಇಂದು ಸ್ಪಿಕ್ ಅಪ್ ಟೂ ಸೆವ್ ಲೈಫ್ ಎಂಬ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜನ ಸಾಮಾನ್ಯರು ತಾವು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ಬೆಳಗ್ಗೆ 10 ಗಂಟೆಯಿಂದ ಸಾಮಾಜಿಕ ಜಾಲ ತಾಣದಲ್ಲಿ ಅಭಿಪ್ರಾಯ ಹಂಚಿಕೊಳ್ಳಬೇಕು, ತಮ್ಮ ಅನುಭವ ಮತ್ತು ಸಲಹೆಗಳನ್ನು ವ್ಯಕ್ತ ಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಸಹಾಯ ಮಾಡುವ ಕೈಗಳ ಅಗತ್ಯ ಇದೆ. ಹಾಗಾಗಿ ಕಾಂಗ್ರೆಸ್ ಆರಂಭಿಸಿರುವ ಅಭಿಯಾನದಲ್ಲಿ ಭಾಗವಹಿಸಿ ಕೊರೊನಾ ವಿರುದ್ಧ ಹೋರಾಟದಲ್ಲಿ ಕೈಜೋಡಿಸಿ ಎಂದು ಕರೆ ನೀಡಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವ ಕುರಿತಂತೆ ಕಾಂಗ್ರೆಸ್ ಪಕ್ಷ, ವೈದ್ಯಕೀಯ ಸಂಘಟನೆ, ಅಂತರಾಷ್ಟ್ರೀಯ ಸಂಸ್ಥೆಗಳು ಹಾಗೂ ವೈದ್ಯಕೀಯ ತಜ್ಞರು ಹಲವು ಸಲಹೆಗಳನ್ನು ನೀಡಿದ್ದರು. ಆದರೂ ಇಂದು ದೇಶದಲ್ಲಿ ಆಕ್ಸಿಜನ್, ಔಷಧಿಗಳು ಸರಿಯಾಗಿ ಸಿಗುತ್ತಿಲ್ಲ. ಪ್ರಜ್ಞಾವಂತರು ಸಾಮಾಜಿಕ ಜಾಲ ತಾಣಗಳಲ್ಲಿ ಲೈವ್ ಗೆ ಬಂದು ತಮ್ಮ ಧ್ವನಿ ಎತ್ತಬೇಕಿದೆ. ಸಾಮಾನ್ಯ ಜನರಿಗೆ ಬೇಕಾದ ಸೌಲಭ್ಯಗಳನ್ನು ದೊರಕಿಸಲು ಮಾತನಾಡಬೇಕಿದೆ ಎಂದು ರಾಹುಲ್ ಗಾಂಧಿ ತಮ್ಮ ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿದ್ದಾರೆ.

Facebook Comments