6 ತಿಂಗಳಿನಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ಆರಂಭ
ಮೈಸೂರು, ಸೆ.10- ಕೊರೊನಾ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ಇದೀಗ ಆರಂಭಗೊಂಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈಲು ಪ್ರಯಾಣಿಕರಿಂದ ರೈಲು ಸಂಚಾರಕ್ಕೆ ಒತ್ತಾಯಿಸಿರುವುದರಿಂದ ಸೆ.12ರಿಂದ ನೈಋತ್ಯ ರೈಲ್ವೆ ವಿಭಾಗದಲ್ಲಿ 40 ಜೋಡಿ ವಿಶೇಷ ರೈಲುಗಳ ಸಂಚಾರದ ಸೇವೆ ಆರಂಭಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಕೊರೊನಾ ಹಿನ್ನೆಲೆಯಲ್ಲಿ ಕೆಲವೆಡೆ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ರೈಲು ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್ ನಂತರವಷ್ಟೇ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ನಿಯಮದಂತೆ ರೈಲು ಸಂಚಾರ ಆರಂಭಿಸಲು ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮುಂಗಡ ಟಿಕೆಟ್ ಕಾಯ್ದಿರಿಸಿಕೊಂಡರೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ರೈಲ್ವೆ ಕೌಂಟರ್ಗಳಲ್ಲಿ ಸದ್ಯದ ಸ್ಥಿತಿಯಲ್ಲಿ ಟಿಕÉಟ್ ಕೊಡಲು ಅವಕಾಶ ಕಲ್ಪಿಸಿಲ್ಲ. ಇದಕ್ಕೆ ಸಹಕರಿಸಬೇಕೆಂದು ಇಲಾಖೆ ಪ್ರಕಟಣೆ ತಿಳಿಸಿದೆ.