ವಲಸೆ ಕಾರ್ಮಿಕರಿಗೆ ಮತ್ತಷ್ಟು ರೈಲುಗಳ ವ್ಯವಸ್ಥೆ ಮಾಡುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 19-ದೇಶದ ವಿವಿಧ ರಾಜ್ಯಗಳಲ್ಲಿ ಲಾಕ್‍ಡೌನ್‍ನಿಂದ ಅತಂತ್ರರಾಗಿರುವ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಮತ್ತಷ್ಟು ವಿಶೇಷ ಶ್ರಮಿಕ್ ಎಕ್ಸ್‍ಪ್ರೆಸ್ ರೈಲುಗಳ ವ್ಯವಸ್ಥೆ ಮಾಡುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಸೂಚನೆ ನೀಡಿದೆ.

ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲ ಅವರು ಎಲ್ಲ ರಾಜ್ಯಗಳು ಮತ್ತು ಯುಟಿಗಳ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದು, ವಲಸೆ ಕಾರ್ಮಿಕರು ಮತ್ತು ಅವರ ಕುಟುಂಬದವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರನ್ನು ಅವರವರ ಊರುಗಳಿಗೆ ತಲುಪಿಸಲು ಇನ್ನಷ್ಟು ವಿಶೇಷ ರೈಲುಗಳನ್ನು ಸಂಚಾರಕ್ಕೆ ಬಿಡಬೇಕು ಎಂದು ತಿಳಿಸಿದ್ದಾರೆ.

ಭಾರತೀಯ ರೈಲ್ವೆಯ ಸಹಕಾರ ಮತ್ತು ಸಮನ್ವಯದೊಂದಿಗೆ ರಾಜ್ಯಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ವೃದ್ಧರು, ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷ ಗಮನ ನೀಡುವಂತೆ ಅವರು ಸಲಹೆ ಮಾಡಿದ್ದಾರೆ.

ಈ ಮಧ್ಯೆ ವಿವಿಧ ರಾಜ್ಯಗಳಿಂದ ಇಂದು ಕೂಡ ಸಹಸ್ರಾರು ವಲಸೆ ಕಾರ್ಮಿಕರನ್ನು ವಿಶೇಷ ರೈಲುಗಳ ಮೂಲಕ ಅವರ ಸ್ವಗ್ರಾಮಗಳಿಗೆ ತಲುಪಿಸಲಾಗಿದೆ. ಇಂದು ಅಪರಾಹ್ಮ ಮತ್ತು ಸಂಜೆ/ರಾತ್ರಿ ಶ್ರಮಿಕವರ್ಗದವರನ್ನು ಹೊತ್ತು ಪ್ರಯಾಣ ಬೆಳೆಸಲಿದೆ.

Facebook Comments

Sri Raghav

Admin