ಬಸ್‍ನಿಲ್ದಾಣದಲ್ಲಿ ಉಗುಳಿದರೆ ದಂಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 30-ಕೋವಿಡ್-19 ನಿಯಂತ್ರಣಕ್ಕೆ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಹಾಗೂ ಸಿಬ್ಬಂದಿಯ ಆರೋಗ್ಯ ಹಿತದೃಷ್ಟಿಯಿಂದ ಬಸ್ ನಿಲ್ದಾಣ, ಕಚೇರಿ, ಘಟಕ, ವಿಭಾಗೀಯ ಕಾರ್ಯಾಗಾರ, ತರಬೇತಿ ಕೇಂದ್ರ ಹಾಗೂ ಉಪಾಹಾರ ಗೃಹಗಳ ಆವರಣದಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ನೂರು ರೂ.ಗಳ ದಂಡ ವಿಧಿಸಲಾಗುವುದು.

ಉಗುಳುವುದನ್ನು ನಿಷೇಧಿಸಲಾಗಿದೆ ಎಂಬ ಫಲಕವನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕರ ಮತ್ತು ನೌಕರರ ಗಮನಕ್ಕೆ ತರಲು ನಿಗಮವು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ.

ನಿಯಮ ಉಲ್ಲಂಘಿಸಿದಾಗ ಯಾರಿಗೆ ದೂರನ್ನು ನೀಡಬೇಕೆಂದಬುದರ ಬಗ್ಗೆ ಅಧಿಕಾರಿಗಳ ಹುದ್ದೆ ಮತ್ತು ದೂರವಾಣಿ ಸಂಖ್ಯೆಯನ್ನು ಫಲಕದಲ್ಲಿ ಪ್ರದರ್ಶಿಸಲು ಸೂಚಿಸಿದೆ. ಆದೇಶ ಉಲ್ಲಂಘಿಸುವ ಸಿಬ್ಬಂದಿಗಳಿಗೆ 200 ರೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.

Facebook Comments