ಗ್ರಾಮೀಣ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆಗೆ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.8- ಗ್ರಾಮೀಣ ಪ್ರತಿಭಾವಂತ ಕ್ರೀಡಾಪಟುಗಳನ್ನು ಸಾಮಥ್ರ್ಯಕ್ಕನುಗುಣವಾಗಿ ಆಯ್ಕೆ ಮಾಡಲು ರಾಜ್ಯದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಫುಟ್‍ಬಾಲ್, ಹಾಕಿ, ಶೂಟಿಂಗ್, ಈಜು, ಟೆನ್ನಿಸ್ ಕ್ರೀಡೆಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಲಭ್ಯ ಸೃಷ್ಟಿಸುವ ಮೂಲಕ ರಾಜ್ಯದ ಕ್ರೀಡಾಪಟುಗಳನ್ನು ಮುಂದಿನ ಒಲಂಪಿಕ್‍ಗೆ ಸಜ್ಜುಗೊಳಿಸಲಾಗುವುದು ಎಂದರು.

[ ಕರ್ನಾಟಕ ಬಜೆಟ್ – 2021 (All Updates) ]

ಮಂಡ್ಯದ ಕ್ರೀಡಾಂಗಣಕ್ಕೆ 10 ಕೋಟಿ ಅನುದಾನ ನೀಡಲಾಗಿದೆ. ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ವಿಶ್ವವಿದ್ಯಾಲಯ ಕ್ರೀಡಾಕೂಟವನ್ನು 2022ರಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಜಕ್ಕೂರಿನಲಿರುವ ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ಸೌಲಭ್ಯಾವೃದ್ಧಿಗೆ 2 ಕೋಟಿ ಅನುದಾನ ಒದಗಿಸಿದೆ ಎಂದರು.

Facebook Comments

Sri Raghav

Admin