ನಟಿ ಹರ್ಷಿಕಾ ಪೂಣಚ್ಚ ವಿರುದ್ಧ ಸಾ.ರಾ.ಮಹೇಶ್ ಗರಂ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜೂ.16- ಕೊಡಗಿನಲ್ಲಿ ಸಂತ್ರಸ್ತರಿಗೆ ಸರ್ಕಾರದಿಂದ ಕಟ್ಟಿಕೊಡಲಾದ ಮನೆಗಳ ಗುಣಮಟ್ಟದ ಬಗ್ಗೆ ಚಿತ್ರ ನಟಿ ಹರ್ಷಿಕಾ ಪೂಣಚ್ಚ ಅವರು ಪ್ರಶ್ನಿಸಿರುವುದರಲ್ಲಿ ಅರ್ಥವಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಗರಂ ಆಗಿ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕೆಯ ವಿದ್ಯಾಭ್ಯಾಸದ ಹಿನ್ನೆಲೆ ಏನು? ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಹೇಳಿದರು.

ಹರ್ಷಿಕಾ ಪೂಣಚ್ಚ ಒಬ್ಬ ಚಿತ್ರ ನಟಿ. ಆಕೆ ಸಿನಿಮಾ ಬಗ್ಗೆ ಏನು ಬೇಕಾದರೂ ಮಾತನಾಡಿಕೊಳ್ಳಲಿ. ಆದರೆ ಕೊಡಗಿನಲ್ಲಿ ಕಟ್ಟಲಾಗಿರುವ ಮನೆಗಳ ಬಗ್ಗೆ ಏನನ್ನೂ ತಿಳಿದುಕೊಳ್ಳದೆ ಮಾತನಾಡುವುದು ಸರಿಯಲ್ಲ ಎಂದು ಸಾ.ರಾ.ಮಹೇಶ್ ಹೇಳಿದರು.

Facebook Comments