ಶನಿವಾರ, ಭಾನುವಾರ ಚಾಮುಂಡೇಶ್ವರಿ ಮತ್ತು ಶ್ರೀಕಂಠೇಶ್ವರನ ದರ್ಶನ ಇಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಜೂ.12- ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ಹಾಗೂ ರಜಾದಿನಗಳಂದು ಜನದಟ್ಟಣೆ ತಪ್ಪಿಸುವ ಸಲುವಾಗಿ ಚಾಮುಂಡಿ ಬೆಟ್ಟ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಗಳಲ್ಲಿ ದರ್ಶನ ನಿಷೇಧಿಸಲಾಗಿದೆ.  ಈ ಕುರಿತು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಆದೇಶ ಹೊರಡಿಸಿದ್ದು ಕೊರೊನಾ ನಿಯಂತ್ರಣಕ್ಕಾಗಿ ಇಂತಹ ಕ್ರಮ ಕೈಗೊಂಡಿದ್ದಾರೆ.

ಶ್ರೀ ಕಂಠೇಶ್ವರ ದೇವಾಲಯಕ್ಕೆ ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆ, ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಮಾತ್ರ ಸೋಮವಾರದಿಂದ ಶುಕ್ರವಾರದವರೆಗೆ ಭಕ್ತರಿಗೆ ದರ್ಶನ ಭಾಗ್ಯ ದೊರೆಯಲಿದೆ.  ಇದೇ ರೀತಿ ಅಧಿದೇವತೆ ಚಾಮುಂಡೇಶ್ವರಿ ದರ್ಶನವನ್ನು ಬೆಳಗ್ಗೆ 7.30ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 3.30ರಿಂದ ಸಂಜೆ 5.30ರ ತನಕ ಮಾಡಬಹುದಾಗಿದೆ.

Facebook Comments