ಅಖಂಡ ಶ್ರೀನಿವಾಸ್ ಮೂರ್ತಿಯವರನ್ನು ಕೇರ್ ಮಾಡದ ಕಾಂಗ್ರೆಸ್ಸಿಗರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.12- ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಅವರ ಬೆನ್ನಿಗೆ ಅವರ ಪಕ್ಷದ ನಾಯಕರೇ ನಿಲ್ಲುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದೊಂದು ಗುಂಪು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರದ್ದೊಂದು ಗುಂಪಿದೆ. ಮನೆಯೊಂದು ಎರಡು ಬಾಗಿಲು ಎಂಬಂತಾಗಿದೆ ಎಂದು ಟೀಕಿಸಿದರು.

ಒಂದು ಗುಂಪು ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಪರವಿದ್ದರೆ ಮತ್ತೊಂದು ಗುಂಪು ಮಾಜಿ ಮೇಯರ ಸಂಪತ್‍ರಾಜ್ ಕಡೆಗಿದೆ. ಅಖಂಡ ಶ್ರೀನಿವಾಸಮೂರ್ತಿ ಅವರು ನೀಡಿರುವ ಹೇಳಿಕೆ ಕೇಳಿದ ತಮ್ಮ ಮನಸ್ಸಿಗೆ ನೋವಾಗಿದೆ ಎಂದರು.

ಆರ್‍ಆರ್‍ನಗರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಸೋಲಬೇಕೆಂದು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದರೆ ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಬೇಕೆಂಬುದು ಡಿಕೆಶಿ ಕನಸ್ಸಾಗಿತ್ತು. ಹೀಗಾಗಿ ಪರೋಕ್ಷವಾಗಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆ ಎಂದು ಹೇಳಿದರು.

Facebook Comments