ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ,ಎಲ್ಲವೂ ಸರಿಯಾಗಿದೆ : ಶ್ರೀರಾಮುಲು

ಈ ಸುದ್ದಿಯನ್ನು ಶೇರ್ ಮಾಡಿ

ರಾಯಚೂರು, ಆ.22- ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ಅಸಮಾಧಾನವಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು. ರಾಯಚೂರಿನಲ್ಲಿ ನೆರೆ ಪೀಡಿತ ಹಾವಳಿ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಮ್ಮೆ ಸಂಪುಟ ವಿಸ್ತರಣೆಯಾಗಲಿದೆ. ಎಲ್ಲ ಸಮಸ್ಯೆ ಬಗೆಹರಿಲಿವೆ ಎಂದರು.

ರೇಣುಕಾಚಾರ್ಯ ಅವರು ಭಾವುಕ ಜೀವಿ. ಹಾಗಾಗಿ ಅವರು ಭಾವುಕರಾಗಿ ಮಾತನಾಡಿದ್ದಾರೆ. ಅವರು ಪಕ್ಷದಲ್ಲಿರುತ್ತಾರೆ. ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ. ಸ್ವಲ್ಪ ಅಸಮಾಧಾನವಿದೆ. ಬಗೆಹರಿಯಲಿದೆ ಎಂದು ಹೇಳಿದರು.

ಯಾವ ಶಾಸಕರೂ ಅತೃಪ್ತರಾಗಿಲ್ಲ. ಪಕ್ಷ ಅಧಿಕಾರಕ್ಕೆ ಬಂದಿದೆ. ಉತ್ತಮ ಕೆಲಸ ಮಾಡಬೇಕೆಂಬುದು ಎಲ್ಲ ಶಾಸಕರು ಮತ್ತು ಕಾರ್ಯಕರ್ತರ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಮುಂದುವರಿಯಲಿದ್ದಾರೆ ಎಂದು ಹೇಳಿದರು.

ಭೀಕರ ಮಳೆ ಮತ್ತು ನೆರೆ ಹಾವಳಿಗೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು ನೆರವಿನ ಭರವಸೆ ನೀಡಿದರು. ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡು ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕೆಂದು ಸೂಚನೆ ನೀಡಿದರು.

Facebook Comments