ಶ್ರೀರಾಮುಲುಗೆ ಡಿಸಿಎಂ ಪಟ್ಟ ತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ, ಆ.27-ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಪಟ್ಟ ತಪ್ಪಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಶ್ರೀರಾಮುಲು ಬೆಂಬಲಿಗರು, ವಾಲ್ಮೀಕಿ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆ ಮುಂತಾದೆಡೆ ಟೈರ್‍ಗಳಿಗೆ ಬೆಂಕಿ ಹಚ್ಚಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಸಮುದಾಯದ ನಾಯಕ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು, ಇಲ್ಲದಿದ್ದರೆ ನಮ್ಮ ಹೋರಾಟ ತೀವ್ರಗೊಳಿಸುತ್ತೇವೆ. ನಾವು ಲಕ್ಷಾಂತರ ಜನರಿದ್ದೇವೆ. 9 ಜಿಲ್ಲೆಗಳಲ್ಲಿ ನಮ್ಮ ಪ್ರಾಬಲ್ಯವಿದೆ.

ಶ್ರೀರಾಮುಲು ಆದ ಅನ್ಯಾಯ, ಉತ್ತರಕರ್ನಾಟಕಕ್ಕೆ ಆದ ಅನ್ಯಾಯ ಎಂದು ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಎಂದೇ ಬಿಂಬಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಾವೆಲ್ಲ ಶ್ರೀರಾಮುಲು ಜೊತೆಯಲ್ಲಿ ಬಿಜೆಪಿ ಜೊತೆಯಲ್ಲಿ ನಿಲ್ಲುತ್ತಿದ್ದೆವು.

ಈಗ ಡಿಸಿಎಂ ಹುದ್ದೆ ಕೊಡದೆ ಅವರಿಗೆ ಅನ್ಯಾಯ ಮಾಡಿರುವುದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಬಿಜೆಪಿ ವಿರುದ್ಧ ಘೋಷಣೆ ಕೂಗಿ ತಮ್ಮ ಅತೃಪ್ತಿ ಹೊರಹಾಕಿದರು.

Facebook Comments