ಚಳ್ಳಕೆರೆ ತಾಲೂಕಿನ ಮೇಲಗೇತನಹಟ್ಟಿಯಲ್ಲಿ ಶ್ರೀರಾಮುಲು ಗ್ರಾಮ ವಾಸ್ತವ್ಯ

ಈ ಸುದ್ದಿಯನ್ನು ಶೇರ್ ಮಾಡಿ

Sriramulu--01

ಚಿತ್ರದುರ್ಗ, ಜೂ.28- ರೈತರ ಸಾಲಮನ್ನಾ ಮಾಡದಿದ್ದರೆ ವಿಧಾನಸೌಧದ ಒಳಗೆ, ಹೊರಗೆ ಹೋರಾಟ ಮಾಡುತ್ತೇವೆ ಎಂದು ಶಾಸಕ, ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಮೇಲಗೇತನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲಮನ್ನಾ ಮಾಡಲು 15 ದಿನ ಕಾಲಾವಕಾಶ ಕೇಳಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅದನ್ನು ಮರೆತಿರುವಂತಿದೆ. ಸಮ್ಮಿಶ್ರ ಸರ್ಕಾರ ಸಾಲಮನ್ನಾ ಮಾಡಬೇಕು. ಇಲ್ಲದಿದ್ದರೆ ನಾವು ರಾಜ್ಯಾದ್ಯಂತ ಹೋರಾಟಕ್ಕಿಳಿಯುತ್ತೇವೆ ಎಂದು ಹೇಳಿದರು.

WhatsApp Image 2018-06-28 at 10.10.22 AM(1)

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ತಿಂಗಳು ಕಳೆದರೂ ಸಕ್ರಿಯಗೊಂಡಿಲ್ಲ. ಮುಖ್ಯಮಂತ್ರಿಗೆ ಎಲ್ಲಿ ಕುರ್ಚಿ ಹೋಗುತ್ತದೋ ಎಂಬ ಆತಂಕ ಕಾಡುತ್ತಿದೆ. ಜನರ ಗೋಳು ಕೇಳುತ್ತಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಅವರಿಗೆ ಬೇಕಾಗಿರುವುದು ವರ್ಗಾವಣೆ ದಂಧೆ. ಸಮ್ಮಿಶ್ರ ಸರ್ಕಾರ ಇರುವಷ್ಟು ಕಾಲ ದುಡ್ಡು ಹೊಡೆಯುವ ತಂತ್ರ ಅನುಸರಿಸುತ್ತದೆ ಎಂದು ಆರೋಪಿಸಿದರು. ನಿಷ್ಕ್ರಿಯ ಸರ್ಕಾರದ ಕಿವಿ ಹಿಂಡಿ ಜನರ ಕೆಲಸ ಮಾಡಲು ಸೂಚಿಸಿದ್ದೇವೆ. ಇಲ್ಲದಿದ್ದರೆ ಹೋರಾಟಕ್ಕಿಳಿಯುತ್ತೇವೆ ಎಂದು ಹೇಳಿದರು.

WhatsApp Image 2018-06-28 at 10.10.22 AM

ಜೆಡಿಎಸ್-ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರಲಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಸಡನ್ನಾಗಿ ತೆಗೆದುಕೊಂಡ ಈ ನಿರ್ಧಾರ ಹೆಚ್ಚು ಕಾಲ ಉಳಿಯುವುದಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಈಗಾಗಲೇ ಉಂಟಾಗಿರುವ ಆಂತರಿಕ ಕಲಹ ತೀವ್ರಗೊಂಡಿದೆ. ಸಮ್ಮಿಶ್ರ ಸರ್ಕಾರ ಅಸ್ಥಿರಗೊಂಡರೆ ಏನಾಗುತ್ತದೋ ಗೊತ್ತಿಲ್ಲ. ಕೆಲವು ಸ್ವತಂತ್ರ ಅಭ್ಯರ್ಥಿಗಳು ನಮ್ಮ ಜತೆ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕೆಂದು ಜನ ತೀರ್ಪು ಕೊಟ್ಟಿದ್ದಾರೆ. ಮುಂದೆ ಏನಾಗುತ್ತದೋ ಜನರ ತೀರ್ಮಾನ, ಭಗವಂತನ ಆಶಯವನ್ನು ಕಾದು ನೋಡೋಣ ಎಂದು ಹೇಳಿದರು.  ಧರ್ಮ ರಕ್ಷಣೆ, ವಿಶ್ವಶಾಂತಿಗಾಗಿ ಶಿವಲಿಂಗ ಪೂಜೆ ಮಾಡಿದ್ದೇನೆ. ಗ್ರಾಮ ವಾಸ್ತವ್ಯದ ಮೂಲಕ ಜನರ ಅಹವಾಲು ಸ್ವೀಕರಿಸಿದ್ದೇನೆ. ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶ್ರೀರಾಮುಲು ಹೇಳಿದರು.

Untitled-2

Facebook Comments

Sri Raghav

Admin