ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ : ಶ್ರೀರಾಮುಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.30- ಮಕರ ಸಂಕ್ರಾಂತಿ ಹಬ್ಬದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಬಿಎಸ್‍ವೈ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದರು. ಎಲ್ಲಾ ಧರ್ಮಗುರುಗಳು ಒಂದೇ. ಆದರೆ ರಾಜಕೀಯ ಕಾರಣಗಳಿಗೆ ದೇವರು, ಧರ್ಮದ ಹೆಸರನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿವಾದಕ್ಕೂ , ಯೇಸು ಕ್ರಿಸ್ತ ಪ್ರತಿಮೆ ವಿವಾದಕ್ಕೂ ಲಿಂಕ್ ಇದ್ದಂತಿದೆ ಎಂದು ಹೇಳಿದರು. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದರೂ ರಾಜಕೀಯ ಕಾರಣಗಳಿಗಾಗಿ ಮಹಾರಾಷ್ಟ್ರ ಕ್ಯಾತೆ ತೆಗೆಯುತ್ತಿದೆ. ಅದಕ್ಕೆ ನಾವು ಹೆದರಬೇಕಾದ ಅಗತ್ಯವಿಲ್ಲ. ಶಿವಸೇನೆಯ ಪುಂಡಾಟಿಕೆಗೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದರು.

Facebook Comments

Sri Raghav

Admin