ಮುಷ್ಕರ ಮಾಡದಂತೆ ವೈದ್ಯರಿಗೆ ಬಿ.ಶ್ರೀರಾಮುಲು ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.15-ವೇತನ ಹೆಚ್ಚಳ ಮಾಡುವ ವಿಚಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಗಮನಕ್ಕೆ ತಂದು ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ವೈದ್ಯರು ಯಾವುದೇ ಕಾರಣಕ್ಕೂ ಮುಷ್ಕರ ಮಾಡಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯರೆಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇಂಥ ಸಂಕಷ್ಟದ ಸಮಯದಲ್ಲಿ ವೈದ್ಯರು ಮುಷ್ಕರ ಮಾಡಿದರೆ ಜನರಿಗೆ ಸಮಸ್ಯೆಯಾಗಲಿದೆ. ಹೀಗಾಗಿ ಮುಷ್ಕರವನ್ನು ಕೈಬಿಡಬೇಕು ಎಂದು ವೈದ್ಯರಲ್ಲಿ ಕೋರಿದರು.

ವೈದ್ಯರ ಸಂಘದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ವೇತನ ಹೆಚ್ಚಳ ಮಾಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಈ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ವೈದ್ಯರ ಸಂಘದ ಪ್ರಮುಖರ ಜೊತೆ ಇಂದು ಸಭೆ ನಡೆಸಿ ಅವರ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.

Facebook Comments

Sri Raghav

Admin