ಕಾಂಗ್ರೆಸ್, ಜೆಡಿಎಸ್ ಆಡಳಿತ ಮಾಡಲು ‘ಅನರ್ಹರು’ ಎಂದು ಜನರು ತಿರಸ್ಕರಿಸಿದ್ದಾರೆ : ಶ್ರೀರಾಮುಲು ಲೇವಡಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.9- ಬಿಜೆಪಿ ಅಭ್ಯರ್ಥಿಗಳನ್ನು ಅನರ್ಹರು, ನಾಲಾಯಕ್ ಎಂದು ಟೀಕಿಸುತ್ತಾ ಜನರ ಮುಂದೆ ಹೋದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ನೀವು ಆಡಳಿತ ಮಾಡಲು ಅನರ್ಹರು ಎಂದು ಜನ ತಿರಸ್ಕರಿಸಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಲೇವಡಿ ಮಾಡಿದ್ದಾರೆ.

ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಟ್ವಿಟರ್‍ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಶ್ರೀರಾಮುಲು, ಅನರ್ಹರು ಯಾರು ಎಂಬುದನ್ನು ಮತದಾರರು ನಿರ್ಧರಿಸಿದ್ದಾರೆ ಎಂದಿದ್ದಾರೆ. ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ನೀಡಿ ರಾಜ್ಯದಲ್ಲಿ ಸ್ಥಿರ ಮತ್ತು ಅಭಿವೃದ್ಧಿ ಆಡಳಿತವನ್ನು ಮತದಾರರು ಬೆಂಬಲಿಸಿದ್ದಾರೆ. ವಿರೋಧ ಪಕ್ಷಗಳ ಟೀಕೆಗೆ ಜನ ಸೂಕ್ತ ಉತ್ತರ ಕೊಟ್ಟಿದ್ದಾರೆ .

ಹುಣಸೂರಿನಲ್ಲಿ ಮತದಾರರ ತೀರ್ಪನ್ನು ಗೌರವಿಸುತ್ತೇವೆ. ಸೋಲಿಗೆ ನೆಪಗಳನ್ನು ಹೇಳದೆ ಒಪ್ಪಿಕೊಳ್ಳುತ್ತೇವೆ. ನಮ್ಮ ಪಕ್ಷದ ಅಭ್ಯರ್ಥಿ ವಿಶ್ವನಾಥ್ ಅವರನ್ನು ಬೆಂಬಲಿಸಿ ಎರಡನೇ ಸ್ಥಾನ ನೀಡುವ ಮೂಲಕ ಮುಂದಿನ ದಿನಗಳಲ್ಲಿ ಹುಣಸೂರಿನಲ್ಲಿ ಬಿಜೆಪಿಗೆ ಭವಿಷ್ಯವಿದೆ ಎಂದು ತೋರಿಸಿಕೊಟ್ಟ ಮತದಾರರಿಗೆ ಕೃತಜ್ಞತೆ ಹೇಳಿದ್ದಾರೆ.

Facebook Comments

Sri Raghav

Admin