ಕೊರೊನಾ ವಾರಿಯರ್ಸ್‌ಗಳಿಂದ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ : ಕೊರೊನಾ ವಾರಿಯರ್ಸ್‌ಗಳಿಂದ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ ಮಾಡಲಾಯಿತು. ಚಾಮುಂಡೇಶ್ವರಿ ದೇವಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮೆರವಣಿಗೆಗೆ ಕೊರೊನಾ ವಾರಿಯರ್ಸ್‌ ಚಾಲನೆ ನೀಡಿದರು.

ರಥದಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವಿರಿಸಿ ಮೆರವಣಿಗೆ ಮಾಡಲಾಯಿತು. ಚಾಮುಂಡೇಶ್ವರಿ ದೇವಿ ವಿಗ್ರಹಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರಿಂದ ಪುಷ್ಪಾರ್ಚನೆ ಮಾಡಿದರು.

ಕಿರಂಗೂರು ದಸರಾ ಬನ್ನಿಮಂಟಪದಿಂದ ರಂಗನಾಥ ದೇವಾಲಯದ ವರೆಗೂ ನಡೆದ ದಸರಾ ಮೆರವಣಿಗೆಯಲ್ಲಿ ಕೊರೊನಾ ಕಾರಣದಿಂದ ಈ ಬಾರಿ ಸರಳವಾಗಿ ಆಚರಿಸಲಾಯಿತು. ಮೆರವಣಿಗೆಯಲ್ಲಿ ಕಡಿಮೆ ಜಾನಪದ ಕಲಾ ತಂಡಗಳಿಗಷ್ಟೇ ಅವಕಾಶ ನೀಡಲಾಗಿತ್ತು.

Facebook Comments

Sri Raghav

Admin