ಏ.20ರ ನಂತರ 7, 9 ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪರಿಷ್ಕ್ರತ ವೇಳಾಪಟ್ಟಿ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.26- ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ 7 ರಿಂದ 9ನೇ ತರಗತಿ ಪರೀಕ್ಷೆಗಳು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಏ. 20 ನಂತರ ಪರಿಷ್ಕ್ರತ ವೇಳಾಪಟ್ಟಿ ಪ್ರಕಟಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಆರ್ ಟಿ ಇ ಅಡಿಯಲ್ಲಿ ಮಕ್ಕಳ ದಾಖಲಾತಿ ಹಾಗೂ 2020-21 ನೇ ಸಾಲಿನ ಶಾಲಾ ದಾಖಲಾತಿ ಪ್ರಕಿಯೆಗಳನ್ನು ಮುಂದೂಡಿದ್ದು, ಏ.20ರ ನಂತರ ಪ್ರಕಟಿಸುವುದಾಗಿ ಸುತ್ತೋಲೆಯಲ್ಲಿ ತಿಳಿಸಿದೆ.

ಏ.15ವರೆಗೆ ರಾಷ್ಟ್ರದಲ್ಲಿ ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಾ.31ವರೆಗೂ ಪರೀಕ್ಷೆಗಳನ್ನು ಮುಂದೂಡಿ ಪರೀಕ್ಷಾ ಪೂರ್ವ ಸಿದ್ಧತಾ ರಜೆಯನ್ನು ಇದಕ್ಕೂ ಮುನ್ನ ಘೋಷಿಸಲಾಗಿತ್ತು.

# ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದಾಗಿದೆ ಎಂಬ ಸುದ್ದಿ ಸುಳ್ಳು  
ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದಾಗಿದೆ ಎಂದು ಹರಡುತ್ತಿರುವ ವದಂತಿ ಶುದ್ಧ ಸುಳ್ಳು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂತಹ ವದಂತಿಯನ್ನು ಹೊರಡಿಸಲಾಗುತ್ತಿದ್ದು ಇದಕ್ಕೇ ವಿದ್ಯಾರ್ಥಿಗಳು ಕಿವಿಗೊಡಬಾರದು ಮತ್ತು ಪೋಷಕರು ಕೂಡ ಆತಂಕಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ಸದ್ಯ ನಿಮ್ಮ ಆರೋಗ್ಯದ ಬಗ್ಗೆ ಮುತುವರ್ಜಿ ವಹಿಸಿ ದೇಶಾದ್ಯಂತ ಇಪ್ಪತ್ತೊಂದು ದಿನಗಳ ಲಾಕ್ ಡೌನ್ ಬಗ್ಗೆ ಆತಂಕ ಬೇಡ ಅಗತ್ಯ ವಸ್ತುಗಳು ನಿಮಗೆ ಸಿಗುತ್ತವೆ ಎಂದು ಹೇಳಿದ್ದಾರೆ.

Facebook Comments

Sri Raghav

Admin