ಪರೀಕ್ಷೆ ರದ್ದು ಮಾಡುವ ಚಿಂತನೆ ಸದ್ಯಕ್ಕಿಲ್ಲ : ಸಚಿವ ಸುರೇಶ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಹನೂರು,ಏ.16- ವಿದ್ಯಾರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ನಿರ್ಣಾಯಕವಾಗಿದ್ದು, ಭವಿಷ್ಯದ ಹಿತದೃಷ್ಟಿಯಿಂದ ಈ ಪರೀಕ್ಷೆಗಳನ್ನು ರದ್ದು ಮಾಡುವ ಚಿಂತನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಪರೀಕ್ಷೆಗೆ ಇನ್ನೂ ಎರಡು ತಿಂಗಳು ಕಾಲಾವಕಾಶವಿದೆ. ವಿದ್ಯಾರ್ಥಿಗಳು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದತ್ತ ಗಮನಹರಿಸಬೇಕೆಂದು ಅವರು ಹೇಳಿದ್ದಾರೆ.

ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ಕಟ್ಟಡಗಳ ಲೋಕಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ನಡೆಸದಿದ್ದರೆ ಶೈಕ್ಷಣಿಕ ಗುಣಮಟ್ಟ ಕುಸಿಯಲಿದೆ. ಹೀಗಾಗಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Facebook Comments