SSLC ವಿದ್ಯಾರ್ಥಿಗಳಿಗೆ ಶುಭ ಕೋರಿದ ಎಚ್‍ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.19- ಯಾವುದೇ ಆತಂಕ ಪಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಉತ್ತಮ ಅಂಕ ಪಡೆದು ಪೋಷಕರಿಗೆ, ಶಾಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತನ್ನಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಇಂದಿನಿಂದ ಎದುರಿಸಲಿದ್ದೀರಿ. ಕೋವಿಡ್-19 ನಿಯಮಗಳನ್ನು ತಪ್ಪದೇ ಪಾಲಿಸಿ ಧೈರ್ಯದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಶುಭ ಕೋರಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪುರ್ ಕೂಡಟ ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಧೈರ್ಯದಿಂದ ಬರೆಯಿರಿ. ಕೊರೊನಾ ಭಯ ಬೇಡ, ಆದರೂ ಎಚ್ಚರವಿರಲಿ ಎಂದಿದ್ದಾರೆ.

Facebook Comments