SSLC ಪರೀಕ್ಷೆ ಕುರಿತು ಸಚಿವರಿಗೆ ಸಭಾಪತಿ ಹೊರಟ್ಟಿ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.16- ಕೋವಿಡ್‍ಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನೂ ಪಾಲಿಸಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ನಡೆಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ಮಾಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ಮಕ್ಕಳ ಹಿತದೃಷ್ಟಿ, ಉಜ್ವಲ ಭವಿಷ್ಯದ ದೃಷ್ಟಿಯಿಂದ ಚಿಂತನೆ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಹೊಣೆ ಹಾಗೂ ಜವಾಬ್ದಾರಿಯಾಗಿದೆ. ನಿಯಮಾನುಸಾರ ಯಥಾಪ್ರಕಾರ ಪರೀಕ್ಷೆ ನಡೆಸುವಂತೆ ಸಲಹೆ ಮಾಡಿದ್ದಾರೆ.

ಮಕ್ಕಳನ್ನು ಕೋವಿಡ್ ಸೋಂಕಿನಿಂದ ಸಂರಕ್ಷಿಸುವ ಬಗ್ಗೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಖಾಸಗಿ ಸಂಸ್ಥೆಗಳಲ್ಲೂ ಆಡಳಿತ ಮಂಡಳಿಗೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸುವ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಒಂದು ಗಟ್ಟಿ ನಿರ್ಧಾರ ತೆಗೆದುಕೊಂಡು ನಿಯಮಗಳ ಪ್ರಕಾರ ಪರೀಕ್ಷೆ ನಡೆಸಬೇಕು. ಯಾವುದೇ ಕ್ರಮ ವಹಿಸಿದರೂ ಸಹ ಜನರ ಪರ-ವಿರೋಧ ಅಭಿಪ್ರಾಯಗಳು ಇದ್ದೇ ಇರುತ್ತವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಇನ್ನೂ ಎರಡು ತಿಂಗಳು ಸಮಯ ಇದೆ. ಈಗಾಗಲೇ ಕೆಲವು ಪಾಲಕರು ಪರೀಕ್ಷೆ ಮುಂದೂಡಬಾರದೆಂಬ ಪ್ರತಿಕ್ರಿಯೆ ನೀಡಿದ್ದಾರೆ. ಪರೀಕ್ಷೆ ಮುಂದೂಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಕಾಲಕಾಲಕ್ಕೆ ನಿಗದಿಯಾದ ಪರೀಕ್ಷೆಗಳನ್ನು ನಡೆಸುವುದರಿಂದ ಮಕ್ಕಳಿಗೆ ಕಲಿಕೆ ಹಾಗೂ ಶಾಲೆ ಬಗ್ಗೆ ಒಳ್ಳೆಯ ಬಾಂಧವ್ಯ ಬೆಳೆಯುತ್ತದೆ ಎಂದಿದ್ದಾರೆ.

ಸಿಬಿಎಸ್‍ಇ 10ನೆ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯದಲ್ಲಿ 10ನೆ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಎಸ್‍ಎಸ್‍ಎಲ್‍ಸಿ ಮಕ್ಕಳು ಮಾನಸಿಕ ಒತ್ತಡ ಅನುಭವಿಸುವುದರಿಂದ ಪರೀಕ್ಷೆ ನಡೆಸುವುದು ಸೂಕ್ತ. ಈಗಾಗಲೇ ಪರೀಕ್ಷೆ ನಡೆಸುವ ಬಗ್ಗೆ ಊಹಾಪೆÇೀಹಗಳು, ಪರ-ವಿರೋಧ ಚರ್ಚೆಗಳು ನಡೆದಿವೆ ಎಂದು ಹೇಳಿದ್ದಾರೆ.

Facebook Comments